ಕೊಲ್ಲೂರು: ಸೌಪರ್ಣಿಕಾ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಮೃತದೇಹ ಪತ್ತೆ – Vishwanews24

Featured, ಉಡುಪಿ

ಕೊಲ್ಲೂರು: ಸೌಪರ್ಣಿಕಾ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಮೃತದೇಹ ಪತ್ತೆ

ಕೊಲ್ಲೂರು: ಇಲ್ಲಿನ ಪ್ರಸಿದ್ಧ ಕ್ಷೇತ್ರ ಶ್ರೀ ಮೂಕಾಂಬಿಕಾ ದೇಗುಲಕ್ಕೆ ದರ್ಶನಕ್ಕೆ ಆಗಮಿಸಿದ್ದ ಮಹಿಳೆ ನದಿಯಲ್ಲಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸೆ. 10ರಂದು ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿದ್ದ ತಿರುವನಂತಪುರದ ಮುರುಗನ್‌ ಅವರ ಪತ್ನಿ ಶಾಂತಿ ಶೇಖರನ್‌(42) ಅವರ ಮೃತದೇಹ ಸೆ. 11ರ ಸಂಜೆ ಅನತಿ ದೂರದಲ್ಲಿ ಪತ್ತೆಯಾಗಿದೆ.

ತಿರುವನಂತಪುರದಿಂದ ಕೊಲ್ಲೂರು ಕ್ಷೇತ್ರ ದರ್ಶನಕ್ಕೆ 14 ಮಂದಿಯ ತಂಡ ಆಗಮಿಸಿತ್ತು. ಅವರು ಸೌಪರ್ಣಿಕಾ ಸ್ನಾನಘಟ್ಟಕ್ಕೆ ತೆರಳಿ ತೀರ್ಥ ಸ್ನಾನಕ್ಕೆಂದು ನದಿಗೆ ಇಳಿದಿದ್ದರು. ಶಾಂತಿ ಶೇಖರನ್‌ ಅವರು ಪುತ್ರ ಆದಿತ್ಯ ನದಿಯ ಸೆಳೆತಕ್ಕೆ ಒಳಗಾಗಿ ನೀರು ಪಾಲಾಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ನೀರಿಗೆ ಧುಮುಕಿದ್ದರು. ಆಕೆಯ ಪತಿ ಮುರುಗನ್‌ ಕೂಡ ಪುತ್ರನನ್ನು ಕಾಪಾಡಲು ನೀರಿಗೆ ಹಾರಿದ್ದರು. ಆದಿತ್ಯ ಹಾಗೂ ಮುರುಗನ್‌ ಈಜಿ ದಡ ಸೇರಿದರೆ ಶಾಂತಿ ಶೇಖರನ್‌ ನೀರಿನ ಸೆಳೆತಕ್ಕೆ ಸಿಲುಕಿ ನದಿಯಲ್ಲಿ ಕೊಚ್ಚಿ ಹೋಗಿದ್ದರು.

ಕೊರಟಗೆರೆ: ನದಿಯಲ್ಲಿ ಕೊಚ್ಚಿ ಹೋಗಿದ್ದ ಚಾಲಕನ ಮೃತದೇಹ ಪತ್ತೆ | udayavani

ಅಗ್ನಿಶಾಮಕ ದಳ, ಕೊಲ್ಲೂರು ಪೊಲೀಸರು ಹಾಗೂ ಈಶ್ವರ ಮಲ್ಪೆ ತಂಡದವರು ಶೋಧ ಕಾರ್ಯ ನಡೆಸಿದ್ದು, ರವಿವಾರ ಸಂಜೆ ಸೌಪರ್ಣಿಕಾ ನದಿಯ 1 ಕಿ.ಮೀ. ದೂರ ವ್ಯಾಪ್ತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಹಣಕಾಸಿನ ವ್ಯವಹಾರದಲ್ಲಿ ಲಾಭ.. ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Leave a Reply