ಕೊಲ್ಲೂರು: ಇಲ್ಲಿನ ಪ್ರಸಿದ್ಧ ಕ್ಷೇತ್ರ ಶ್ರೀ ಮೂಕಾಂಬಿಕಾ ದೇಗುಲಕ್ಕೆ ದರ್ಶನಕ್ಕೆ ಆಗಮಿಸಿದ್ದ ಮಹಿಳೆ ನದಿಯಲ್ಲಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸೆ. 10ರಂದು ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿದ್ದ ತಿರುವನಂತಪುರದ ಮುರುಗನ್ ಅವರ ಪತ್ನಿ ಶಾಂತಿ ಶೇಖರನ್(42) ಅವರ ಮೃತದೇಹ ಸೆ. 11ರ ಸಂಜೆ ಅನತಿ ದೂರದಲ್ಲಿ ಪತ್ತೆಯಾಗಿದೆ.
ತಿರುವನಂತಪುರದಿಂದ ಕೊಲ್ಲೂರು ಕ್ಷೇತ್ರ ದರ್ಶನಕ್ಕೆ 14 ಮಂದಿಯ ತಂಡ ಆಗಮಿಸಿತ್ತು. ಅವರು ಸೌಪರ್ಣಿಕಾ ಸ್ನಾನಘಟ್ಟಕ್ಕೆ ತೆರಳಿ ತೀರ್ಥ ಸ್ನಾನಕ್ಕೆಂದು ನದಿಗೆ ಇಳಿದಿದ್ದರು. ಶಾಂತಿ ಶೇಖರನ್ ಅವರು ಪುತ್ರ ಆದಿತ್ಯ ನದಿಯ ಸೆಳೆತಕ್ಕೆ ಒಳಗಾಗಿ ನೀರು ಪಾಲಾಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ನೀರಿಗೆ ಧುಮುಕಿದ್ದರು. ಆಕೆಯ ಪತಿ ಮುರುಗನ್ ಕೂಡ ಪುತ್ರನನ್ನು ಕಾಪಾಡಲು ನೀರಿಗೆ ಹಾರಿದ್ದರು. ಆದಿತ್ಯ ಹಾಗೂ ಮುರುಗನ್ ಈಜಿ ದಡ ಸೇರಿದರೆ ಶಾಂತಿ ಶೇಖರನ್ ನೀರಿನ ಸೆಳೆತಕ್ಕೆ ಸಿಲುಕಿ ನದಿಯಲ್ಲಿ ಕೊಚ್ಚಿ ಹೋಗಿದ್ದರು.
ಅಗ್ನಿಶಾಮಕ ದಳ, ಕೊಲ್ಲೂರು ಪೊಲೀಸರು ಹಾಗೂ ಈಶ್ವರ ಮಲ್ಪೆ ತಂಡದವರು ಶೋಧ ಕಾರ್ಯ ನಡೆಸಿದ್ದು, ರವಿವಾರ ಸಂಜೆ ಸೌಪರ್ಣಿಕಾ ನದಿಯ 1 ಕಿ.ಮೀ. ದೂರ ವ್ಯಾಪ್ತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…