ಕಾಪು : ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೆ.ಎಂ.ಎಫ್ ವತಿಯಿಂದ ಕೊಡ ಮಾಡಲ್ಪಟ್ಟ ಐವತ್ತು ಸಾವಿರ ರೂಪಾಯಿ ಮೌಲ್ಯದ ಔಷಧಿ ಪರಿಕರಗಳನ್ನು ಶನಿವಾರ ಹಸ್ತಾಂತರಿಸಲಾಯಿತು.
ಔಷಧಿ ಪರಿಕರಗಳನ್ನು ಹಸ್ತಾಂತರಿಸಿದ ಕೆ.ಎಂ.ಎಫ್ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ತಾರತಮ್ಯ ರಹಿತ ಸೇವೆ ನೀಡಿರುವ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರವು ಜಿಲ್ಲೆಗೆ ಮಾದರಿಯಾಗಿ ಮೂಡಿಬಂದಿದೆ. ಇಲ್ಲಿನ ಸೇವೆಯನ್ನು ಗುರುತಿಸಿ, ಸಾರ್ವಜನಿಕರ ಸೇವೆಗೆ ಅವಶ್ಯಕತೆ ಇರುವ ಸವಲತ್ತುಗಳನ್ನು ನೀಡಿದ್ದೇವೆ. ಅಗತ್ಯವಿದ್ದಲ್ಲಿ ಇನ್ನಷ್ಟು ಉತ್ತಮ ಸೇವೆ ನೀಡಲು ಬದ್ಧರಿದ್ದೇವೆ ಎಂದರು.
ಕಾಪು ತಾಲೂಕಿನ ಜನತೆಯ ಅನುಕೂಲಕ್ಕಾಗಿ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿಡ್ನಿ ಡಯಾಲಿಸಿಸ್ ಘಟಕ ಸ್ಥಾಪನೆಯ ಅತ್ಯಗತ್ಯವಾಗಿದ್ದು ಅದಕ್ಕೆ ಪೂರಕವಾಗಿ ಕೆಎಂಎಫ್ ಸಹಿತ ವಿವಿಧ ಸಂಘ ಸಂಸ್ಥೆಗಳ ಮೂಲಕವಾಗಿ ಸಹಕರಿಸುವುದಾಗಿ ಭರವಸೆ ನೀಡಿದರು.
ಸ್ಪೂರ್ತಿ ದಿವಾಕರ ಶೆಟ್ಟಿ,
ಗಿರಿಜಾ ಹೆಲ್ತ್ ಕೇರ್ ಸರ್ವೀಸಸ್ ನ ಆಡಳಿಯ ನಿರ್ದೇಶಕ ರವೀಂದ್ರ ಕೆ. ಶೆಟ್ಟಿ, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಾಯ ಕಾಮತ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಮಮತಾ ರೈ ಪ್ರಸ್ತಾವನೆಗೈದು, ವಂದಿಸಿದರು. ಚಂದ್ರಕಲಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…