ಮಣಿಪಾಲ, 2ನೇ ಜನವರಿ 2021: ಮಣಿಪಾಲದ ಕಸರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಳನ್ನು ನಡೆಸುತ್ತಿದ್ದು ಇದನ್ನು ಭಾರತದ ಕೆಲವೇ ಪ್ರತಿಷ್ಠಿತ ಕ್ಯಾನ್ಸರ್ ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುತ್ತದೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯ ಶಸ್ತ್ರಚಿಕಿತ್ಸಕ ಡಾ.ನವೀನ ಕುಮಾರ ಹೇಳಿದರು.
ಶ್ವಾಸ ನಾಳದ (ವಿಂಡ್ ಪೈಪ್ ) ಕ್ಯಾನ್ಸರ್ ಶಸ್ತ್ರಚಿಕಿತ್ಸೆಯು ಒಂದು ಕ್ಲಿಷ್ಟಕರವಾದ ಮತ್ತು ಅತ್ಯಂತ ಸಂಕೀರ್ಣವಾದ ಶಸ್ತ್ರಚಿಕಿತ್ಸೆಗಳಲ್ಲಿ ಒಂದಾಗಿದ್ದು, ಅಲ್ಲಿ ಕ್ಯಾನ್ಸರ್ ಗೆಡ್ಡೆಯ ಜೊತೆಗೆ ಶ್ವಾಸನಾಳದ ಭಾಗವನ್ನು ತೆಗೆದುಹಾಕಲಾಗುತ್ತದೆ ಮತ್ತು ಉಳಿದ ಶ್ವಾಸ ನಾಳವನ್ನು ಕೆಳಗಿನ ಭಾಗ ಅಥವಾ ಶಾಖೆಗಳಿಗೆ (ಮುಖ್ಯ, ಬ್ರಾಂಕಸ್) ಸಂಪರ್ಕಿಸಲಾಗುತ್ತದೆ. ಶ್ವಾಸ ನಾಳದ ಕ್ಯಾನ್ಸರ್, ಶ್ವಾಸನಾಳವನ್ನು ಮುಚ್ಚುವುದರ ಮೂಲಕ ಉಸಿರಾಟದ ತೊಂದರೆಗಳಿಗೆ ಕಾರಣವಾಗುತ್ತದೆ. ಈ ಶಸ್ತ್ರಚಿಕಿತ್ಸೆಯು ರೋಗಿಯ ಜೀವ ಉಳಿಸುವ ಮತ್ತು ಕ್ಯಾನ್ಸರ್ ಗುಣಪಡಿಸುವ ವಿಧಾನವಾಗಿ ಮಣಿಪಾಲದ ಕಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗವು ಇತ್ತೀಚೆಗೆ 70 ವರ್ಷ ರೋಗಿ ಸೇರಿದಂತೆ, ಇಂತಹ4 ಕಾನ್ಸರ್ ರೋಗಿಗಳಿಗೆ ಪ್ರಮುಖ ಟ್ರಾಕಿಯೊಬ್ರಾಂಕಿಲ್ (ಶ್ವಾಸನಾಳದ) ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಪ್ರಸ್ತುತ ಈ ರೋಗಿಯ 9 ತಿಂಗಳಿಂದ ಆರೋಗ್ಯವಾಗಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯ ಶಸ್ತ್ರಚಿಕಿತ್ಸಕ ಡಾ.ನವೀನ ಕುಮಾರ ಹೇಳಿದರು.
ಹೀಗೆ ಹದಿನೈದು ವರ್ಷದ ಬಾಲಕನಿಗೆ ಕೂಡ ಎದೆಯಲ್ಲಿ ಗೆಡ್ಡೆಯಾಗಿದ್ದು ಇದನ್ನು ಕೂಡ 14 ಗಂಟೆಗೆ ಸುದೀರ್ಘ ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಲಾಯಿತು ಪ್ರಸ್ತುತ ಈ ವ್ಯಕ್ತಿ ಕೂಡ ತಪಾಸಣೆಯೊಂದಿಗೆ ಆರೋಗ್ಯವಾಗಿದ್ದಾರೆ ಎಂದರು.
ಹೀಗೆ ಹತ್ತಾರು ಇಂತಹ ಪ್ರಕರಣಗಳಿಗೆ ಸೂಕ್ತ ಚಿಕಿತ್ಸೆಯ ಮೂಲಕ ಪರಿಹಾರ ನೀಡುವಲ್ಲಿ ಮುಂಬೈನ ಪ್ರತಿಷ್ಠಿತ ಟಾಟಾ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆಯಲ್ಲಿ ತರಬೇತಿ ಪಡೆದ ಡಾ.ನವಾಜ್ ಉಸ್ಮಾನ್,ಡಾ.ಕೇಶವ ರಾಜನ್,ಡಾ.ಪ್ರೀತಿ ಶೆಟ್ಟಿ,ನುರಿತ ತಂಡ ಇದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಡಾ.ಸುಧಾ ಪ್ರಭು,ಡಾ.ಪದ್ಮರಾಜ್ ಹೆಗ್ಡೆ, ಡಾ ನವೀನ್ ಸಾಲಿನ್ಸ್ ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…