Featured

ಕೆ.ಎಸ್‌.ಆರ್‌.ಟಿ.ಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ : ಆರೋಪಿಗೆ ನಾಲ್ಕು ತಿಂಗಳ ಜೈಲು ಶಿಕ್ಷೆ – vishwanews24

ಕೆ.ಎಸ್‌.ಆರ್‌.ಟಿ.ಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ : ಆರೋಪಿಗೆ ನಾಲ್ಕು ತಿಂಗಳ ಜೈಲು ಶಿಕ್ಷೆ

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.

ಪುತ್ತೂರು ತಾಲೂಕಿನ ಮಾಡನ್ನೂರು ನಿವಾಸಿ ಮುಹಮ್ಮದ್ ಸತ್ತಾರ್ ಶಿಕ್ಷೆಗೆ ಒಳಗಾದ ಅಪರಾಧಿ.

ಕಳೆದ ಎಪ್ರಿಲ್ 25ರಂದು ಕೆಎಸ್ಸಾರ್ಟಿಸಿ ಬಸ್ ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಸಮಯ ಯುವತಿ ಕುಳಿತಿದ್ದ ಸೀಟಿನ ಪಕ್ಕ ಕುಳಿತಿದ್ದ ಆರೋಪಿ ಬಸ್ಸು ಸಂಚರಿಸುತ್ತಿದ್ದ ಸಮಯ ಲೈಂಗಿಕ ಕಿರಿಕುಳ ನೀಡಿರುವ ಬಗ್ಗೆ ದಾಖಲಾಗಿತ್ತು. ಪ್ರಕರಣದ ಬಗ್ಗೆ ತನಿಖಾಧಿಕಾರಿಗಳಾಗಿ ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜೇಶ್ ಕೆ.ವಿ. ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾತಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್ ಮತ್ತು ಎ.ಸಿ. ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣಪುರ್ ಆರೋಪಿಗೆ ನಾಲ್ಕು ತಿಂಗಳಗಳ ಕಾರಾಗೃಹವಾಸ ಮತ್ತು 10 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ನೀಡಲು ತಪ್ಪಿದಲ್ಲಿ ಒಂದು ತಿಂಗಳ ಕಾಲ ಹೆಚ್ಚುವರಿ ಕಾರಾಗೃಹ ಶಿಕ್ಷೆಯನ್ನು ವಿಧಿಸಿದ್ದಾರೆ.

ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕರಾಗಿ ಕವಿತಾ ಕೆ. ವಾದಿಸಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

8 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

8 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

9 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

9 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

11 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

11 hours ago