ಕಾಪು: ಕಾಪು ಪುರಸಭೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ಅಮ್ಮ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿಯವರ ವತಿಯಿಂದ ರೇಷನ್ ಕಿಟ್ ವಿತರಿಸುವ ಕಾರ್ಯ ಮತ್ತು ತಲಾ ಒಬ್ಬರಿಗೆ ಒಂದು ಸಾವಿರ ರೂಪಾಯಿ ನಗದು ನೀಡುವ ಕಾರ್ಯ ಕಾಪು ಪುರಸಭೆಯಲ್ಲಿನಡೆಯಿತು.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಕಿಟ್ ವಿತರಿಸಿದರು.
ಕಿಟ್ ಕೊಡುಗೆ ನೀಡಿದ ಕೆ.ವಾಸುದೇವ ಶೆಟ್ಟಿ ಮಾತಾಡಿ ” ಇದುವರೆಗೆ ನಾಲ್ಕು ನೂರು ಕುಟುಂಬಗಳಿಗೆ ಅಮ್ಮ ಟ್ರಸ್ಟ್ ವತಿಯಿಂದ ಕಿಟ್ ವಿತರಿಸಿದ್ದು,ವಿಶೇಷವಾಗಿ ಕಾಪು ಪುರಸಭೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ವಿಶೇಷವಾಗಿ ಗೌರವಿಸಿ ಅವರಿಗೆ ರೇಷನ್ ಕಿಟ್ ಮತ್ತು ತಲಾ ಒಂದು ಸಾವಿರ ನಗದು ವಿತರಣೆ ಮಾಡುತ್ತಿದ್ದೇವೆ.ಇವೆಲ್ಲವೂ ದೇವರ ಸೇವೆ ಎಂಬ ದೃಷ್ಟಿಯಿಂದ ಕಾರ್ಯ ನಡೆಯುತ್ತಿದೆ ಎಂದರು.
ಸುಮಾರು ಐವತ್ತು ಪೌರಕಾರ್ಮಿಕರಿಗೆ ತಲಾ ಒಂದು ಸಾವಿರದಂತೆ ಐವತ್ತು ಸಾವಿರ ಪ್ರೋತ್ಸಾಹಕರ ಧನಸಹಾಯ ಮಾಡಲಾಯಿತು.
ಈ ಸಂಧರ್ಭದಲ್ಲಿ ತಹಶಿಲ್ದಾರ್ ಮಹಮ್ಮದ್ ಇಸಾಕ್, ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ ಟ್ರಸ್ಟಿಗಳಾದ ನಡಿಕೆರೆ ರತ್ನಾಕರ್ ಶೆಟ್ಟಿ, ಭೂಪತಿ ಶೆಟ್ಟಿ, ಹರೀಶ್ ಪೂಜಾರಿ,ಪುರಸಭಾ ಸದಸ್ಯ ಅನಿಲ್ ಕುಮಾರ್ , ಸುರೇಶ್ ದೇವಾಡಿಗ, ಮೊದಲಾದವರು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…