Featured

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮ ಮಂದಿರ ನಿರ್ಮಾಣ : ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ – Vishwanews24

ಡೆಹ್ರಾಡೂನ್‌: ‘ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾತ್ರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಲಿದೆ’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹರೀಶ್‌ ರಾವತ್‌ ಹೇಳಿದ್ದಾರೆ.

“ಬಿಜೆಪಿ ಮಿತಿ ಮೀರಿ ವರ್ತಿಸುತ್ತಿದೆ. ಯಾರು ಕಾನೂನನ್ನು ಮುರಿಯುತ್ತಾರೋ ಅವರು ಮರ್ಯಾದಾ ಪುರುಷೋತ್ತಮ ರಾಮನ ಭಕ್ತನಾಗಲು ಸಾಧ್ಯವಿಲ್ಲ. ನಾವು ಕಾನೂನಿಗೆ ಗೌರವ ನೀಡುತ್ತೇವೆ. ಕಾಂಗ್ರೆಸ್​ ಅಧಿಕಾರ ಬಂದಮೇಲೆ ರಾಮ ಮಂದಿರ ನಿರ್ಮಾಣವಾಗಲಿದೆ,” ಎಂದು ಹೇಳುವ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್​ ಮಾತ್ರ ಅರ್ಹ ಎಂದು ಸೂಚ್ಯವಾಗಿ ಹೇಳಿದ್ದಾರೆ.

ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದ ರಾವತ್‌, ‘ವಿರೋಧ ಪಕ್ಷಗಳನ್ನು ಅಧಿಕಾರದಿಂದ ಹೇಗಾದರೂ ಮಾಡಿ ಕೆಳಗಿಸುವುದು ಬಿಜೆಪಿ ಉದ್ದೇಶ. ಅದಕ್ಕಾಗಿ, ಹಣ ದುರ್ಬಳಕೆ, ತೋಳ್ಬಲದ ಜತೆಗೆ ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಇಲಾಖೆಗಳಂತ ಸಂಸ್ಥೆಗಳನ್ನು ಬಿಜೆಪಿ ರಾಜಕೀಯ ಅಸ್ತ್ರಗಳನ್ನಾಗಿ ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದರು.

2025ರ ಒಳಗೆ ರಾಮ ಮಂದಿರ ನಿರ್ಮಾಣ ಮಾಡಬೇಕು ಎಂದು ಆರ್​ಎಸ್​​ಎಸ್​ನ ಎರಡನೇ ಮುಖ್ಯಸ್ಥ ಭಯ್ಯಾಜಿ ಜೋಶಿ ಶುಕ್ರವಾರ ಹೇಳಿಕೊಂಡಿದ್ದರು. ಅಲ್ಲದೆ, ಈ ಕ್ರಮದಿಂದ ದೇಶಕ್ಕೆ ಮುಂದಿನ 150 ವರ್ಷ ಒಳ್ಳೆಯದಾಗುತ್ತದೆ ಎಂದು ಹೇಳಿಕೊಂಡಿದ್ದರು. “1952ರಲ್ಲಿ ಸೋಮನಾಥ ದೇವಾಲಯ ನಿರ್ಮಾಣ ಮಾಡಲಾಯಿತು. ಅದಾದ ನಂತರ ದೇಶ ಅಭಿವೃದ್ಧಿ ವೇಗ ಪಡೆದುಕೊಂಡಿತ್ತು. 2025ರಲ್ಲಿ ರಾಮ ಮಂದಿರ ನಿರ್ಮಾಣ ಮಾಡಿದ ನಂತರ ದೇಶಕ್ಕೆ ಒಳಿತಾಗಲಿದೆ. ನಂತರ 150 ವರ್ಷಗಳ ಕಾಲ ದೇಶಕ್ಕೆ ಯಾವುದೇ ಕೇಡು ಎದುರಾಗದು,” ಎಂದಿದ್ದರು ಭಯ್ಯಾಜಿ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹರೀಶ್​ ರಾವತ್​ ಈ ಹೇಳಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ನಡೆಸುತ್ತಿರುವ ಕುತಂತ್ರಕ್ಕೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ಸಿಗಲಿದೆ. ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಕೂಟ ಕರ್ನಾಟಕದಲ್ಲಿ 27 ಲೋಕಸಭೆ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಹೇಳಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago