ಜಮ್ಮು: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ಯೋಜನೆಯನ್ನು ರದ್ದುಪಡಿಸುವುದರೊಂದಿಗೆ ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಜಾರಿ ಮಾಡಲಾಗುತ್ತದೆ ಎಂದು ರಾಜ್ಯಸಭೆ ಸಂಸದ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸೈಯದ್ ನಾಸಿರ್ ಹುಸೇನ್ ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆ ಜಮ್ಮುವಿನಲ್ಲಿ ಮಾತನಾಡಿದ ಅವರು, ಅಗ್ನಿವೀರ್ ಯೋಜನೆ ಅನುಷ್ಠಾನದಿಂದ ಅನೇಕ ರಾಜ್ಯಗಳ ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಮತ್ತು ಲಡಾಖ್‌ನಂತಹ ಗುಡ್ಡಗಾಡು ಪ್ರದೇಶದ ಯುವಕರು ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ನಾಲ್ಕು ವರ್ಷಗಳ ಸೈನಿಕ ಸೇವೆಯ ನಂತರ ಯುವಕರು ಮತ್ತೆ ನಿರುದ್ಯೋಗಿಗಳಾಗಲಿದ್ದಾರೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈ ಯೋಜನೆಯನ್ನು ಪರಿಚಯಿಸುವ ಮೂಲಕ ದೇಶದ ಭದ್ರತೆ, ಸಂರಕ್ಷಣೆಯೊಂದಿಗೆ ರಾಜಿ ಮಾಡಿಕೊಂಡಿದೆ. ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ಯೋಜನೆಯನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಘೋಷಣೆ ಮಾಡಿದ್ದಾರೆ. ಈ ಯುವ ವಿರೋಧಿ ಯೋಜನೆಯನ್ನು ರದ್ದುಗೊಳಿಸುವ ಮೂಲಕ ಕಾಂಗ್ರೆಸ್ ದೇಶದ ಯುವಕರಿಗೆ ದೊಡ್ಡ ಪರಿಹಾರವನ್ನು ನೀಡುತ್ತದೆ ಎಂದರು.
\
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…