ನವದೆಹಲಿ: ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಅಧಿಕಾರಕ್ಕೆ ಬಂದ ಮರುಕ್ಷಣವೇ ಯುವಜನತೆಯ ಪಾಲಿಗೆ ಕಂಟಕವಾಗಿರುವ ಅಗ್ನಿಪಥ (ಅಗ್ನಿವೀರ) ಸೇನಾ ನೇಮಕಾತಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ನೆಮಕಾತಿ ಪದ್ಧತಿಯನ್ನು ಮರುಜಾರಿ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕರು ಸೋಮವಾರ ಘೋಷಿಸಿದ್ದಾರೆ.
ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೂರೂ ಸೇನಾಪಡೆಗಳ ದಂಡನಾಯಕರಾಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ‘ಯುವಜನರನ್ನು ತೊಂದರೆಗೆ ಸಿಲುಕಿಸುವ ಅಗ್ನಿಪಥ ಯೋಜನೆಯನ್ನು ಕೂಡಲೇ ರದ್ದುಗೊಳಿಸಬೇಕು. ಇದರಿಂದ ನಾಲ್ಕು ವರ್ಷಗಳ ಹೊರಬರುವ ಅಗ್ನಿವೀರರಿಗೆ ಮತ್ತೆ ಉದ್ಯೋಗ ಹುಡುಕುವುದು ಕಷ್ಟವಾಗುತ್ತದೆ. ಅಲ್ಲದೆ ಅಗ್ನಿಪಥ ಯೋಜನೆ ಘೋಷಣೆಗೂ ಮೊದಲು ಸೇನೆಗೆ ಆಯ್ಕೆಯಾಗಿದ್ದ 2 ಲಕ್ಷ ಮಂದಿಗೆ ಪ್ರಕ್ರಿಯೆಯನ್ನೇ ರದ್ದುಗೊಳಿಸಿರುವುದಾಗಿ ತಿಳಿಸಿ ಅತಂತ್ರಕ್ಕೆ ಸಿಲುಕಿಸಲಾಗಿದೆ. ಅವರಿಗೂ ಕೂಡಲೇ ನೇಮಕಾತಿ ಆದೇಶವನ್ನು ನೀಡಲು ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.
‘ಈ ಯೋಜನೆಗೆ ತಮ್ಮ ಸಹಮತವಿರಲಿಲ್ಲ ಎಂಬುದಾಗಿ ಮಾಜಿ ಸಶಸ್ತ್ರ ಪಡೆಗಳ ಮುಖ್ಯಸ್ಥರಾದ ಜ। ಮನೋಜ್ ನರವಣೆ ಅವರೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಜನೆಯನ್ನು ರದ್ದುಗೊಳಿಸಬೇಕು’ ಎಂದು ತಿಳಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…