ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿದ ನಂತರವೇ ಗುಂಪು ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ : ರಾಹುಲ್ ಗಾಂಧಿ – Vishwanews24
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿದ ನಂತರವೇ ಗುಂಪು ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ ..
2014ಕ್ಕೂ ಮೊದಲು ಗುಂಪು ಹತ್ಯೆ ನಡೆಯುತ್ತಲೇ ಇರಲಿಲ್ಲ ..
ಆಡಳಿತ ಪಕ್ಷದ ವಿರುದ್ಧ ರಾಹುಲ್ ಗಾಂಧಿ ..
ನವದೆಹಲಿ: 2014ಕ್ಕೂ ಮೊದಲು ಗುಂಪು ಹತ್ಯೆ ನಡೆಯುತ್ತಲೇ ಇರಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಡಳಿತ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ.
ಟ್ವೀಟ್ : ಬಿಜೆಪಿ 2014ರಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಅದು ಅಧಿಕಾರಕ್ಕೆ ಬರುವುದಕ್ಕೂ ಮೊದಲು ದೇಶದಲ್ಲಿ ಗುಂಪು ಹತ್ಯೆ (lynching) ಎಂಬುದನ್ನು ಪ್ರಾಯೋಗಿಕವಾಗಿ ನೋಡಲು ಸಾಧ್ಯವೇ ಇರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
2014 से पहले ‘लिंचिंग’ शब्द सुनने में भी नहीं आता था।
Before 2014, the word ‘lynching’ was practically unheard of. #ThankYouModiJi
— Rahul Gandhi (@RahulGandhi) December 21, 2021
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿದ ನಂತರವೇ ಗುಂಪು ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಅದಕ್ಕೂ ಮೊದಲು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಗುಂಪು ಹತ್ಯೆಗಳು ನಡೆಯುತ್ತಿರಲಿಲ್ಲ ಎಂದಿದ್ದಾರೆ. ಪಂಜಾಬ್ ನಲ್ಲಿ ಇತ್ತೀಚೆಗೆ 24ಗಂಟೆಯೊಳಗೆ ಎರಡು ಗುಂಪು ಹತ್ಯೆಗಳು ನಡೆದ ಬೆನ್ನಲ್ಲೇ ರಾಹುಲ್ ಗಾಂಧಿ ಈ ಟ್ವೀಟ್ ಮಾಡಿದ್ದಾರೆ.
ಉಡುಪಿ: ಟೆಲಿಫೋನ್ ಕಂಬಕ್ಕೆ ಕಾರು ಡಿಕ್ಕಿ; ಓರ್ವ ಸಾವು, ಮೂವರಿಗೆ ಗಂಭೀರ ಗಾಯ – VIshwanews24
