Featured

ಕೇಂದ್ರದಿಂದ ನೆರೆ ಪರಿಹಾರ ಹಣ ಬಂದೇ ಬರುತ್ತದೆ, ತಾಂತ್ರಿಕ ಕಾರಣಗಳಿಂದ ಪರಿಹಾರ ಹಣ ಬರುವುದು ತಡವಾಗಿದೆ : ಸುಮಲತಾ -Vishwanews24

ಮೈಸೂರು:ಕೇಂದ್ರದಿಂದ ನೆರೆ ಪರಿಹಾರ ಹಣ ಬಂದೇ ಬರುತ್ತದೆ, ತಾಂತ್ರಿಕ ಕಾರಣಗಳಿಂದ ಪರಿಹಾರ ಹಣ ಬರುವುದು ತಡವಾಗಿದೆ ಎಂದು ಸಂಸದೆ ಸುಮಲತಾ ಹೇಳಿದರು

ಮೈಸೂರಿನಲ್ಲಿ ಮಾತನಾಡಿದ ಸುಮಲತಾ ಅವರು, ಯಶ್ ಹಾಗೂ ದರ್ಶನ್ ಬರಬೇಕು ಎಂಬುದು ತುಂಬಾ ಚಿಕ್ಕ ವಿಷಯ. ಏಕೆಂದರೆ ಎಂಪಿಯಾಗಿ ಆಯ್ಕೆಯಾಗಿರುವುದು ನಾನು. ಯಶ್ ಹಾಗೂ ದರ್ಶನ್ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ನಮಗೆ ಬೆಂಬಲ ನೀಡಲು ಬರುತ್ತಾರೆ. ಸರ್ಕಾರದಲ್ಲಿ ಅವರಿಗೆ ಯಾವುದೇ ಅಧಿಕಾರ ಇಲ್ಲ. ಅವರು ಬಂದು ಏನೂ ಮಾಡುತ್ತಾರೆ. ನನ್ನ ಕೆಲಸ ನಾನು ಮಾಡಬೇಕು. ಯಶ್ ಹಾಗೂ ದರ್ಶನ್ ಮಂಡ್ಯಕ್ಕೆ ಬರುತ್ತಾರೆ. ಮೊದಲಿನಿಂದಲೂ ಅವರು ಬರುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರದ ನೆರೆ ಪರಿಹಾರ ಹಣ ನೀಡದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪರಿಹಾರ ಹಣ ಬಂದೇ ಬರುತ್ತದೆ. ಏನೋ ತಾಂತ್ರಿಕ ಕಾರಣ ಉಂಟಾಗಿದೆ. ಹೀಗಾಗಿ ಪರಿಹಾರ ಹಣ ಬರುವುದು ತಡವಾಗಿದೆ. ಆದರೆ ಪರಿಹಾರ ಹಣ ಬರುತ್ತೆ ಎಂಬ ವಿಶ್ವಾಸ ನನಗಿದೆ. ಜನರು ಪ್ರಶ್ನೆ ಮಾಡುತ್ತಿರುವುದು ಒಳ್ಳೆಯದು. ನಾವು ಯಾರ ಬಳಿ ಮಾತನಾಡಬೇಕೋ ಅವರ ಬಳಿ ಮಾತನಾಡುತ್ತಿದ್ದೇವೆ. ಅವರು ಇದೇ ಕಾರಣವನ್ನು ನೀಡುತ್ತಿದ್ದಾರೆ ಎಂದು ಸುಮಲತಾ ತಿಳಿಸಿದ್ದಾರೆ.

ನಾನು ಎಂಪಿ ಆಗಿರುವುದು ಜೆಡಿಎಸ್ ನಾಯಕರಿಗೆ ಉತ್ತರ ಕೊಡುವುದ್ದಕ್ಕೆ ಅಲ್ಲ. ನನ್ನ ಉತ್ತರ ಏನಿದ್ದರೂ ನನಗೆ ಮತ ನೀಡಿದ ಮಂಡ್ಯ ಜನತೆಗೆ ಮಾತ್ರ. ನಾನು ರಾಜಕೀಯವಾಗಿ ಮಾತನಾಡುವವರಿಗೆ ಉತ್ತರ ನೀಡಲ್ಲ. ಸುಮಕ್ಕ ಎಲ್ಲಿದ್ದಾರೆ ಎಂದು ಪ್ರಶ್ನೆ ಕೇಳುತ್ತಾರೆ. ನಾನು ಎಲ್ಲಿಯೂ ಹೋಗಿಲ್ಲ. ನಾನು ಇಲ್ಲಿಯೇ ಇದ್ದೀನಿ ಹಾಗೂ ನನ್ನ ಕೆಲಸ ಮಾಡುತ್ತಿದ್ದೇನೆ. ಯಾರಿಗೆ ಒತ್ತಡ ಹೇರಬೇಕೋ, ಯಾರ ಬಳಿ ಮನವಿ ಮಾಡಬೇಕೋ ಎಲ್ಲವನ್ನು ನಾನು ಮಾಡುತ್ತಿದ್ದೇನೆ ಎಂದರು.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago