ಬೆಂಗಳೂರು : ”ಸ್ವಾವಲಂಬಿ ಭಾರತ ಯೋಜನೆಯಡಿ ದೇಶದಲ್ಲಿ ಪ್ಲಾಸ್ಟಿಕ್ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ದೇಶದಲ್ಲಿ ಎರಡು ಪ್ಲಾಸ್ಟಿಕ್ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್‌ಗೆ 40 ಕೋ.ರೂ. ನೀಡಲಾಗುತ್ತದೆ” ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದರು.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ”ಕರ್ನಾಟಕದ ಕರಾವಳಿ ನಗರ ಮಂಗಳೂರು ಹಾಗೂ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಒಂದೊಂದು ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲು ಇತ್ತೀಚೆಗೆ ನಡೆದ ರಾಸಾಯನಿಕ ಇಲಾಖೆಯ ಯೋಜನೆ ಚಾಲನಾ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್‌ಗೆ ಯೋಜನಾ ವೆಚ್ಚದ 50 ಪ್ರತಿಶತದಷ್ಟು ಹಣ 40 ಕೋಟಿ ರೂ. ಕೇಂದ್ರ ಸರ್ಕಾರವು ನೀಡಲಿದ್ದು ಉಳಿದ ಹಣವನ್ನು ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ (ಕೆಎಸ್‌ಐಡಿಸಿ) ಯಂತಹ ಸಂಸ್ಥೆಗಳ ಮೂಲಕ ಅಥವಾ ನೂತನ ವಿಶೇಷ ಉದ್ದೇಶದೊಡನೆ ಪಡೆದುಕೊಳ್ಳಬಹುದು” ಎಂದು ಮಾಹಿತಿ ನೀಡಿದರು.
”ಯೋಜನೆಗಾಗಿ ಆರು ತಿಂಗಳಲ್ಲಿ ಅಂತಿಮ ಅನುಮತಿ ಪಡೆಯಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಆದ್ದರಿಂದ ಯೋಜನೆ ಯಾವ ವಿಳಂಬವಿಲ್ಲದೆ ಜಾರಿಯಾಗುವ ನಿರೀಕ್ಷೆ ಇದೆ” ಎಂದು ಹೇಳಿದರು.
”ವಿವಿಧ ಕಾರಣಗಳಿಗಾಗಿ ಸ್ಥಗಿತಗೊಂಡಿದ್ದ ನಾಲ್ಕು ರಸಗೊಬ್ಬರ ಕಾರ್ಖಾನೆಗಳನ್ನು ಪುನಶ್ಚೇತನ ಮಾಡಲಾಗುತ್ತಿದೆ. ಇದಕ್ಕಾಗಿ 50 ಸಾವಿರ ಕೋಟಿ ರೂಪಾಯಿಗಿಂತ ಅಧಿಕ ವೆಚ್ಚವಾಗುತ್ತದೆ. ಈ ಪೈಕಿ ರಾಮಗುಂಡಮ್ ಸ್ಥಾವರದ ಕೆಲಸ ಬಹುತೇಕ ಮುಗಿದಿದೆ” ಎಂದು ಹೇಳಿದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…