ಕೇಂದ್ರದಿಂದ ರಾಜ್ಯಕ್ಕೆ ನೆರೆ ಪರಿಹಾರ ಬಿಡುಗಡೆ : ಪ್ರಧಾನಿಗೆ ಅಭಿನಂದನೆ ಸಲ್ಲಿಸಿದ ಬಿಎಸ್ ವೈ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯಕ್ಕೆ ಎರಡನೇ ಕಂತಿನಲ್ಲಿ ನೆರೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಸಿಎಂ ಬಿಎಸ್​.ಯಡಿಯೂರಪ್ಪ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ಧಾರೆ. “ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದು ಹೋದ ಕೂಡಲೇ 1869 ಕೋಟಿ  ನೆರೆ ಪರಿಹಾರ ಬಿಡುಗಡೆ ಮಾಡಿದ್ಧಾರೆ. ಈ ಮೊದಲು 1200 ಕೋಟಿ ಹಣ ಬಿಡುಗಡೆ ಮಾಡಿದ್ದರು. ಇವಾಗ 1869 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ.  ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಹಾರ ಕಾರ್ಯಗಳಿಗೆ ಹಣ ಬಿಡುಗಡೆ ಮಾಡಿದ್ದಾರೆ.  ಅದಕ್ಕಾಗಿ ಪ್ರಧಾನಿಯವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ,” ಎಂದರು.

“ಕೇಂದ್ರದಿಂದ ಇನ್ನೂ ಹಂತ ಹಂತವಾಗಿ ಹಣ ಬಿಡುಗಡೆಯಾಗಲಿದೆ. ಮತ್ತಷ್ಟು ಹಣ ಬಿಡುಗಡೆ ಮಾಡುವ ವಿಶ್ವಾಸ ಇದೆ. ಈಗ ಬಿಡುಗಡೆ ಆಗಿರುವ ಹಣ ಸಾಕಾಗುವುದಿಲ್ಲ.  ಇವಾಗ ಎರಡು ಕಂತುಗಳಲ್ಲಿ ಹಣ ಬಿಡುಗಡೆ ಮಾಡಿದ್ದಾರೆ,” ಎಂದು ಹೇಳಿದರು.

1200 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಕೇಂದ್ರದಿಂದ ಇನ್ನು ಹಂತ ಹಂತವಾಗಿ ಹಣ ಬಿಡುಗಡೆಯಾಗಲಿದೆ. ಮತ್ತಷ್ಟು ಹಣ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದರು.