Featured

ಕೇಂದ್ರದಿಂದ ಸಾಂಕೇತಿಕ‌ ನೆರೆ ಪರಿಹಾರ ಬಂದಿದೆ, ಕಾಪು ತಾಲೂಕು ಮಟ್ಟದ ಜನಸಂಪರ್ಕ ಸಭೆಯಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್.

ಕಾಪು ತಾಲೂಕು ಮಟ್ಟದ ಜನಸಂಪರ್ಕ ಸಭೆ .

ಕಾಪು: ಕಾಪು ತಾಲೂಕು ಮಟ್ಟದ ಜನ‌ಸಂಪರ್ಕ ಸಭೆಯು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ಅವರ ಉಪಸ್ಥಿತಿಯಲ್ಲಿ ಕಾಪು ಲಕ್ಷ್ಮಿ ಜನಾರ್ಧನ‌ ದೇಗುಲದ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್ ಮಾತಾಡಿ” ರಾಜ್ಯದಲ್ಲಿ ಉಲ್ಬಣಗೊಂಡಿರುವ ನೆರೆ ಮತ್ತು ಬರಕ್ಕೆ ಪೂರಕವಾದ ವ್ಯವಸ್ಥೆಯನ್ನ ಕಲ್ಪಿಸುವಲ್ಲಿ ಸರ್ಕಾರ ಬದ್ದವಾಗಿದ್ದು ಸಂತ್ರಸ್ತರಿಗೆ ಪರಿಹಾರ ನೀಡುವ ಕಾರ್ಯ ನಡೆಯುತ್ತಿದೆ ಆದರೆ ಕೇಂದ್ರದಿಂದ ಮಾತ್ರ ಕೇವಲ‌ ಸಾಂಕೇತಿಕ ಪರಿಹಾರ ಘೋಷನೆಯಾಗಿದೆ ಮುಂದಿನ ದಿನದಲ್ಲಿ ಹೆಚ್ಚಿನ ಪರಿಹಾರ ನೀಡುವ ಭರವಸೆ ಇದೆ ಎಂದರು.
‌ಕಾಪು ತಾಲ್ಲೂಕು ಮಟ್ಟದಲ್ಲಿ ಅಗತ್ಯವಿರುವ ಎಲ್ಲಾ ಇಲಾಖೆಗಳನ್ನ ಸನ್ನದುಗೊಳಿಸುವವಲ್ಲಿ ಸತತ ಪ್ರಯತ್ನಗಳು‌ ನಡೆಯುತ್ತಿದೆ ಅದರ ಜತೆಗೆ ಕೇಂದ್ರದ ಯೋಜನೆಗಳನ್ನ ಜನಸಾಮಾನ್ಯರಿಗೆ ಮುಟ್ಟಿಸುವ ಪ್ರಯತ್ನ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.

ಕಸ ವಿಲೇವಾರಿಗೆ ಹೆಚ್ಚಿನ‌ ಒತ್ತನ್ನು ನೀಡುವ ಮುಖಾಂತರ ಮತ್ತು ಆದಷ್ಟು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೇರಿದ ಜನಸ್ತೋಮದಲ್ಲಿ ವಿನಂತಿಸಿದರು.

ಮುಂದಿನ‌ ದಿನದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಈಗಾಗಲೇ ಸೂಕ್ತ ಕ್ರಮದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದಿಂದ ಕ್ರಮ ಕೈಗೊಳ್ಳವ ಪ್ರಯತ್ನ ಕೂಡ ನಡೆಯುತ್ತಿದೆ ಎಂದರು.
ಇದೇ ಸಂಧರ್ಭದಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷರುಗಳು, ತಾಲೂಕು ಪಂಚಾಯತ್ ಸದಸ್ಯರು,ಜಿಲ್ಲಾ ಪಂಚಾಯತ್ ಸದಸ್ಯರು ಉಪಸ್ಥಿತಿತರಿದ್ದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

8 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago