Featured

ಕೇಂದ್ರದ ಜೊತೆ ನಾವಿದ್ದೇವೆ, ಉಗ್ರ ಚಟುವಟಿಕೆಗಳು ಈ ದೇಶದಿಂದ ಹೋಗಬೇಕು : ಸಿಎಂ – vishwanews24

ಕೇಂದ್ರದ ಜೊತೆ ನಾವಿದ್ದೇವೆ, ಉಗ್ರ ಚಟುವಟಿಕೆಗಳು ಈ ದೇಶದಿಂದ ಹೋಗಬೇಕು : ಸಿಎಂ

ಬೆಂಗಳೂರು: ಕೇಂದ್ರ ಸರ್ಕಾರದ ಜೊತೆ ನಾವಿದ್ದೇವೆ. ಎಲ್ಲಾ ಉಗ್ರ ತಾಣಗಳನ್ನು ನಾಶಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ.

ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ  ಬಲಿಯಾದ ಮತ್ತಿಕೆರೆಯ ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸರ್ಕಾರದ ಪರವಾಗಿ ಕನ್ನಡ ನಾಡಿನ ಏಳು ಕೋಟಿ ಜನರ ಪರವಾಗಿ ಭರತ್ ಭೂಷಣ್‌ಗೆ ಶ್ರದ್ದಾಂಜಲಿ ಸಲ್ಲಿಸಿದ್ದೇನೆ. ಇನ್ನೂ ಚಿಕ್ಕ ವಯಸ್ಸು. ಭರತ್ ಭೂಷಣ್ ಬಿಇ ಎಂಬಿಎ ಮಾಡಿದ್ದಾರೆ. ಉಗ್ರರು ಅಮಾನವೀಯವಾಗಿ ಕೃತ್ಯ ಎಸಗಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸಿದ್ದೇನೆ. ಉಗ್ರ ಚಟುವಟಿಕೆಗಳು ಈ ದೇಶದಿಂದ ಹೋಗಬೇಕು. ಯಾವುದೇ ಕಾರಣಕ್ಕೂ ಸರ್ಕಾರ ಕನಿಕರ ತೋರಬಾರದು ಎಂದು ಮನವಿ ಮಾಡಿದರು.

ಹಾಡಹಗಲೇ ಹೆಂಡತಿ, ಮಗು ಇದ್ದಾಗಲೆ ಶೂಟ್ ಮಾಡೋದಕ್ಕಿಂತ ಹೇಯಕೃತ್ಯ ಇನ್ನೊಂದಿಲ್ಲ. ಮನುಷ್ಯತ್ವ ಇಲ್ಲದವರು ಅವರು. ಇದನ್ನು ಖಂಡಿಸುತ್ತೇನೆ. ಇದೇ ಜಿಲ್ಲೆಯಲ್ಲಿ ಪುಲ್ವಾಮ ಅಟ್ಯಾಕ್ ಆಯಿತು. ಘಟನೆಯಲ್ಲಿ 40 ಸೈನಿಕರು ಸಾವನ್ನಪ್ಪಿದ್ದರು. ಅಲ್ಲೇ ಇದೀಗ ಮತ್ತೆ ಮರುಕಳಿಸಿದೆ. ಅವರು ಎಲ್ಲೇ ಇದ್ದರೂ ಪತ್ತೆ ಹಚ್ಚಿ ನಿರ್ಮೂಲನೆ ಮಾಡಬೇಕು. ಬಹುಷಃ ಎಲ್ಲೋ ಒಂದು ಕಡೆ ಇಂಟೆಲಿಜೆನ್ಸ್ ಫೇಲ್ಯೂರ್ ಆಗಿದೆ ಅನ್ನಿಸುತ್ತಿದೆ ಎಂದರು.

ಸತ್ತವರ ಕುಟುಂಬಗಳಿಗೆ ನಮ್ಮ ಸರ್ಕಾರ 10 ಲಕ್ಷ ರೂ. ಪರಿಹಾರ ನೀಡಿದೆ. ಯಾವಾಗಲೂ ನಮ್ಮ ಸರ್ಕಾರ ಕುಟುಂಬದ ಜೊತೆ ಇದೆ. ಸಚಿವ ಸಂತೋಷ್ ಲಾಡ್ ಅವರನ್ನು ಕೂಡಲೇ ಕಾಶ್ಮೀರಕ್ಕೆ ಕಳುಹಿಸಿದ್ದೆ. ಮೃತದೇಹಗಳು ಹಾಗೂ ಕನ್ನಡಿಗರನ್ನು ವಾಪಸ್ ಕರೆತರುವಂತೆ ತಿಳಿಸಿದ್ದೆ. 177 ಜನರನ್ನು ಲಾಡ್ ವಾಪಸ್ ಕರೆತರುತ್ತಿದ್ದಾರೆ. ಇನ್ನೊಂದು ಸಾರಿ ಉಗ್ರ ಕೃತ್ಯ ಮರುಕಳಿಸದೆ ಇರುವ ಹಾಗೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago