Featured

ಕೇಂದ್ರದ ಮೂರು ಕೃಷಿ ಕಾಯ್ದೆಗೆ ತಾತ್ಕಾಲಿಕ ತಡೆ , ಸಮಿತಿ ರಚನೆ : ಆದೇಶ ನೀಡಿದ ಸುಪ್ರೀಂ -Vishwanews24

ಕೇಂದ್ರದ ನೂತನ ಮೂರು ಕೃಷಿ ಕಾಯ್ದೆಗೆ ತಾತ್ಕಾಲಿಕ ತಡೆ , ಸಮಿತಿ ರಚನೆ : ಆದೇಶ ನೀಡಿದ ಸುಪ್ರೀಂ -Vishwanews24

ನವದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಬೃಹತ್ ಪ್ರತಿಭಟನೆಯನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸುವುದಾಗಿ ಮಂಗಳವಾರ(ಜನವರಿ 12, 2021) ಸುಪ್ರೀಂಕೋರ್ಟ್ ತಿಳಿಸಿದ್ದು, ಅಲ್ಲದೇ ಮೂರು ವಿವಾದಿತ ಕೃಷಿ ಕಾಯ್ದೆ ಜಾರಿಗೆ ತಾತ್ಕಾಲಿಕವಾಗಿ ತಡೆ ನೀಡಿ ಮಹತ್ವದ ಆದೇಶ ನೀಡಿದೆ.

“ಇದೊಂದು ಸಾವು-ಬದುಕಿನ ವಿಷಯವಾಗಿದೆ. ನಮಗೆ ಕಾಯ್ದೆ ಬಗ್ಗೆಯೂ ಕಾಳಜಿ ಇದೆ, ಅದೇ ರೀತಿ ಪ್ರತಿಭಟನೆಯಿಂದಾಗುವ ಜೀವಹಾನಿ ಮತ್ತು ಆಸ್ತಿ ಹಾನಿ ಬಗ್ಗೆಯೂ ಕಳವಳ ಇದೆ. ಅದಕ್ಕಾಗಿ ಉತ್ತಮ ರೀತಿಯಲ್ಲಿ ಸಮಸ್ಯೆಯನ್ನು ಬಗೆಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಈ ಕಾಯ್ದೆಯನ್ನು ತಡೆ ಹಿಡಿಯುವ (ರದ್ದು) ಅಧಿಕಾರ ಕೂಡಾ ನಮಗಿದೆ” ಎಂದು ಸಿಜೆಐ ಎಸ್ ಎ ಬೋಬ್ಡೆ ತಿಳಿಸಿದರು.

ಮುಂದಿನ ಆದೇಶ ನೀಡುವವರೆಗೆ ಕೇಂದ್ರದ ಮೂರು ನೂತನ ಕೃಷಿ ಕಾಯ್ದೆಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಅಲ್ಲದೇ ನಾಲ್ವರು ಕೃಷಿ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸುವುದಾಗಿ ತಿಳಿಸಿದೆ. ಸಮಿತಿಯ ಸದಸ್ಯರು ಪ್ರತಿಭಟನಾಕಾರರು ಮತ್ತು ಕೇಂದ್ರದ ಜತೆ ಮಾತುಕತೆ ನಡೆಸಲಿದೆ ಎಂದು ಆದೇಶ ನೀಡಿದೆ.

ಸಮಿತಿ ಸುಪ್ರೀಂಕೋರ್ಟ್ ಗೆ ವರದಿಯನ್ನು ನೀಡಲಿದೆ. ಸಮಿತಿಗೆ ರೈತರು ಸಹಕಾರ ನೀಡಬೇಕು. ಆದರೆ ನ್ಯಾಯಾಂಗದ ಪ್ರಕ್ರಿಯೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಬಾರದು ಎಂದು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.

ಕೃಷಿ ಆರ್ಥಿಕ ತಜ್ಞ ಅಶೋಕ್ ಗುಲಾಟಿ, ಜಿತೇಂದ್ರ ಸಿಂಗ್ ಮಾನ್, ಅನಿಲ್ ಧನ್ವತ್ ಹಾಗೂ ಡಾ.ಪಿ.ಕೆ ಜೋಶಿ ಅವರನ್ನೊಳಗೊಂಡ ತಜ್ಞರ ಸಮಿತಿಯನ್ನು ಸುಪ್ರೀಂಕೋರ್ಟ್ ನೇಮಕ ಮಾಡಿದೆ.

ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ರೈತ ಸಂಘಟನೆಗಳಿಗೆ ನೋಟಿಸ್ ಜಾರಿ ಮಾಡಿದ್ದು, ಜನವರಿ 26 ಗಣರಾಜ್ಯೋತ್ಸವದಂದು ನಡೆಸಲು ಉದ್ದೇಶಿಸಿದ್ದ ಟ್ರ್ಯಾಕಟರ್ ರಾಲಿಯನ್ನು ಕೈಬಿಡುವಂತೆ ಸೂಚಿಸಿದೆ.

http://ಜನವರಿ 14ರಿಂದ 16 ರ ವರೆಗೆ ಶ್ರೀ ಕ್ಷೇತ್ರ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಮಕರ ಸಂಕ್ರಮಣ ಉತ್ಸವ ; ಕೊರೋನಾ ಹಿನ್ನೆಲೆ ಭಕ್ತಾಧಿಗಳಿಗೆ ಗೆಂಡಸೇವೆಗೆ ಅವಕಾಶವಿಲ್ಲ -Vishwanews24

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

4 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

4 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

4 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

5 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

9 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

9 hours ago