ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ – Vishwanews24

Featured, ರಾಜ್ಯ ನ್ಯೂಸ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ಬೆಳಿಗ್ಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬಸವರಾಜ್ ಹೊರಟ್ಟಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ‌ ಜಗದೀಶ್ ಶೆಟ್ಟರ್ ಅವರೊಂದಿಗೆ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಬಳಿಕ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಬಸವರಾಜ್ ಹೊರಟ್ಟಿ, ಹಲವು ದಿನಗಳಿಂದ ಬಿಜೆಪಿ ಸೇರ್ಪಡೆ ಬಗ್ಗೆ ಚಿಂತನೆ ನಡೆಸಿದ್ದೆ. ಇದೀಗ ಅಮಿತ್ ಶಾ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದು ಖುಷಿ ತಂದಿದೆ ಎಂದರು.

ಇನ್ನು ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಇದುವರೆಗೆ ಯಾರಿಗೂ ಟಿಕೆಟ್ ಘೋಷಿಸಿಲ್ಲ. ಹೊರಟ್ಟಿ ಸೇರ್ಪಡೆ ಬಳಿಕ ಘೋಷಣೆ ಮಾಡಲು ನಿರ್ಧರಿಸಲಾಗಿತ್ತು.

ಉಡುಪಿ: ಕರ್ತವ್ಯನಿರತ ಪೊಲೀಸ್ ಆತ್ಮಹತ್ಯೆ ಪ್ರಕರಣ – ಎರಡು ಆಡಿಯೋ ರೆಕಾರ್ಡ್‌ ಬಹಿರಂಗ – Vishwanews24

Leave a Reply