ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ಬೆಳಿಗ್ಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಸವರಾಜ್ ಹೊರಟ್ಟಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರೊಂದಿಗೆ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಬಳಿಕ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಬಸವರಾಜ್ ಹೊರಟ್ಟಿ, ಹಲವು ದಿನಗಳಿಂದ ಬಿಜೆಪಿ ಸೇರ್ಪಡೆ ಬಗ್ಗೆ ಚಿಂತನೆ ನಡೆಸಿದ್ದೆ. ಇದೀಗ ಅಮಿತ್ ಶಾ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದು ಖುಷಿ ತಂದಿದೆ ಎಂದರು.
ಇನ್ನು ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಇದುವರೆಗೆ ಯಾರಿಗೂ ಟಿಕೆಟ್ ಘೋಷಿಸಿಲ್ಲ. ಹೊರಟ್ಟಿ ಸೇರ್ಪಡೆ ಬಳಿಕ ಘೋಷಣೆ ಮಾಡಲು ನಿರ್ಧರಿಸಲಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…