ಬೆಂಗಳೂರು: ಇಂದು ಕೇಂದ್ರ ವಿತ್ತ ಮಂತ್ರಿಗಳಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ನಮ್ಮ ದೇಶದ ಆರ್ಥಿಕತೆಗೆ ಬೂಸ್ಟರ್ ಡೋಸ್ ಆಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಸಂತೋಷ ವ್ಯಕ್ತಪಡಿಸಿದರು.
ಕೇಂದ್ರದ ಬಜೆಟ್ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಉಲ್ಲೇಖಿಸಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದರ್ಶಿತ್ವದಲ್ಲಿ ನಾವುಗಳು ಅಭಿವೃದ್ದಿಯ ಅಮೃತ ಕಾಲಕ್ಕೆ ಸಾಕ್ಷಿಯಾಗಿದ್ದೇವೆ. ಮುಂದಿನ 25 ವರ್ಷಗಳ ಅಭಿವೃದ್ದಿಯ ನೀಲಿನಕ್ಷೆಯನ್ನು ವಿತ್ತ ಸಚಿವರು ನೀಡಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ :
ಬಜೆಟ್ ನಲ್ಲಿ, ಹೆದ್ದಾರಿ ಜಾಲವನ್ನ 25 ಸಾವಿರ ಕಿಲೋಮೀಟರ್‌ಗಳಷ್ಟು ವಿಸ್ತರಿಸುವುದು. ದೇಶದ 5 ನದಿಗಳನ್ನು ಜೋಡಿಸುವ ವಿಸ್ತ್ರುತ ಯೋಜನೆಯನ್ನು ಅಂತಿಮಗೊಳಿಸಿರುವುದು. ನೈಸರ್ಗಿಕ ಕೃಷಿಗೆ ಒತ್ತು ನೀಡುವಂತಹ ಮಹತ್ವದ ಅಂಶಗಳನ್ನು ಆಯವ್ಯಯದಲ್ಲಿ ತಿಳಿಸಿದ್ದಾರೆ ಎಂದು ವಿವರಿಸಿದರು. ಹಾಗೆಯೇ, ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ ತರಗತಿಗೊಂದು ಟಿವಿ ಚಾನೆಲ್ ಪ್ರಸ್ತಾವನೆ, ಪ್ರಾದೇಶಿಕ ಭಾಷೆಗಳೂ ಸೇರಿ 200 ಹೊಸ ಚಾನಲ್ ಆರಂಭಕ್ಕೆ ಪ್ರಸ್ತಾಪ, ಶಿಕ್ಷಕರುಗಳಿಗೆ ಡಿಜಿಟಲ್ ಟೂಲ್ಸ್‍ಗಳ ನೀಡುವಿಕೆ ಹೀಗೆ ಶಿಕ್ಷಣ ಕ್ಷೇತ್ರದ ಅಮೂಲಾಗ್ರ ಬದಲಾವಣೆಗೂ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
2 ಲಕ್ಷ ಅಂಗನವಾಡಿಗಳ ಉನ್ನತೀಕರಣದಿಂದ ನಮ್ಮ ದೇಶದ ಮಕ್ಕಳಿಗೆ ಅತ್ಯುತ್ತಮ ಗುಣಮಟ್ಟದ ಪ್ರಾಥಮಿಕ ಶಿಕ್ಷಣ ದೊರೆಯಲಿದೆ. ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಗೆ ಒತ್ತು. ಮಹಿಳಾ ಮತ್ತು ಮಕ್ಕಳ ಅಭ್ಯುದಯಕ್ಕೂ ಬಜೆಟ್‍ನಲ್ಲಿ ಆದ್ಯತೆ ನೀಡಲಾಗಿದೆ ಎಂದರು.
ಭವಿಷ್ಯದಲ್ಲಿ ಭಾರತ ದೇಶವನ್ನು ತಾಂತ್ರಿಕವಾಗಿ ಮತ್ತಷ್ಟು ಮೇಲ್ದರ್ಜೆಗೇರಿಸುವ ಮೂಲಕ ಎಲ್ಲ ವರ್ಗದ ಅಭ್ಯುದಯಕ್ಕೆ ಆದ್ಯತೆ ನೀಡಿರುವ ಬಜೆಟ್ ಇದಾಗಿದೆ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ :
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…