Featured

ಕೇಂದ್ರ ಬಜೆಟ್ ಭವಿಷ್ಯದ ಭಾರತಕ್ಕೆ ಪೂರಕವಾದ ನೀತಿ- ನಿರೂಪಕ ಅಂಶಗಳನ್ನು ಹೊಂದಿದೆ : ಸುನಿಲ್‌ ಕುಮಾರ್‌ – Vishwanews24

ಕೇಂದ್ರ ಬಜೆಟ್ ಭವಿಷ್ಯದ ಭಾರತಕ್ಕೆ ಪೂರಕವಾದ ನೀತಿ- ನಿರೂಪಕ ಅಂಶಗಳನ್ನು ಹೊಂದಿದೆ : ಸುನಿಲ್‌ ಕುಮಾರ್‌ – VIshwanews24

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್ ಭವಿಷ್ಯದ ಭಾರತಕ್ಕೆ ಪೂರಕವಾದ ನೀತಿ- ನಿರೂಪಕ ಅಂಶಗಳನ್ನು ಹೊಂದಿದೆ. ಇಂಧನ ಕ್ಷೇತ್ರಕ್ಕೆ ದೂರದೃಷ್ಟಿಯ ಸ್ಪರ್ಶ ನೀಡಿದ್ದಾರೆ ಎಂದು ಇಂಧನ ಸಚಿವ ಸುನಿಲ್‌ ಕುಮಾರ್‌ ಹೇಳಿದ್ದಾರೆ.

ಮುಂದಿನ 25 ವರ್ಷಗಳ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ತಯಾರಿಸಲಾಗಿದೆ. ಯಾವುದೇ‌ ಒಂದು ವರ್ಗದ ಓಲೈಕೆಗೆ ಸೀಮಿತವಾಗಿರದೇ ಪಾಲಿಸಿ ಆಧರಿತ ಕಾರ್ಯಕ್ರಮಗಳ ಜಾರಿಗೆ ಕೇಂದ್ರ ಆದ್ಯತೆ ನೀಡಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಸ್ವಚ್ಛ ಇಂಧನಕ್ಕೆ ಬಜೆಟ್ ನಲ್ಲಿ ಒತ್ತು ನೀಡಿದ್ದಾರೆ.

ಕೇಂದ್ರ ಸರಕಾರದ ಆದ್ಯತಾ ವಲಯದಲ್ಲಿ ಇಂಧನ ಕ್ಷೇತ್ರ ಸೇರಿದ್ದು, ವಿದ್ಯುತ್ ಪ್ರಸರಣ ಮತ್ತು ಆಧುನೀಕರಣಕ್ಕೆ ಒತ್ತು ನೀಡಿದ್ದಾರೆ. ವಿಶೇಷವಾಗಿ ಹಸಿರು ಶಕ್ತಿ ಮೂಲಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಸುಸ್ಥಿರ ಅಭಿವೃದ್ಧಿಗೆ ಕಡಿಮೆ‌‌ ಇಂಗಾಲ ಬಿಡುಗಡೆ ಮಾಡುವ ಶಕ್ತಿ ಮೂಲಗಳ ಬಳಕೆಗೆ ಅಗತ್ಯ ಎಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ವಿಶ್ವ ವೇದಿಕೆಯಲ್ಲಿ ಪ್ರತಿಪಾದಿಸಿದ್ದರು.‌ ಇದರ ಮುಂದುವರಿದ ಭಾಗವಾಗಿ ʼಪಂಚಾಮೃತʼ ಕಲ್ಪನೆಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು‌ ನೀಡಿದ್ದಾರೆ.

ಇದನ್ನೂ ಓದಿ :

ಯಾವುದೋ ಒಂದು ರಾಜ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ಘೋಷಿಸುವ ಪರಂಪರೆಯನ್ನು ಈ ಬಾರಿ ಕೈ ಬಿಡಲಾಗಿದೆ. ದೇಶದ ಸಮಷ್ಠಿ ದೃಷ್ಟಿಕೋನ ಬಜೆಟ್ ನಲ್ಲಿದೆ. ನವೋದ್ಯಮ, ಕೃಷಿ, ರೈಲು, ಇಂಧನದ ಜತೆಗೆ ರಕ್ಷಣಾ ಇಲಾಖೆಯಲ್ಲಿ ಆತ್ಮ ನಿರ್ಭರತೆಗೆ‌ ಕೇಂದ್ರ ಒತ್ತು‌ನೀಡಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರದ ಕೊಡುಗೆ ವಿಫುಲವಾಗಿದೆ. “ಒನ್ ಕ್ಲಾಸ್ ಒನ್ ಟಿವಿ ಚಾನಲ್” ಮೂಲಕ ಇ- ವಿದ್ಯಾ ಯೋಜನೆ ಜಾರಿಗೆ ಮುಂದಾಗಿದೆ. ಇದು ಕೋವಿಡ್ ಸಂದರ್ಭದಲ್ಲಿ ಪೂರ್ಣ ಶಿಕ್ಷಣ ವಂಚಿತ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗುತ್ತದೆ. ಎಂದು ಇಂಧನ ಸಚಿವ ಸುನಿಲ್‌ ಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago