ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ : ರಾಷ್ಟ್ರಪತಿಯನ್ನು ಭೇಟಿ ಮಾಡಿದ ಸಚಿವೆ ನಿರ್ಮಲಾ ಸೀತಾರಾಮನ್ – vishwanews24
ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ : ರಾಷ್ಟ್ರಪತಿಯನ್ನು ಭೇಟಿ ಮಾಡಿದ ಸಚಿವೆ ನಿರ್ಮಲಾ ಸೀತಾರಾಮನ್
8ನೇ ಬಾರಿ ಬಜೆಟ್ ಮಂಡನೆ ಮಾಡಲಿದ್ದಾರೆ ನಿರ್ಮಲಾ ಸೀತಾರಾಮನ್
ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಶನಿವಾರ) ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿದ್ದು, ಇದಕ್ಕೆ ಮುನ್ನ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ.
ಈ ವೇಳೆ ಹಣಕಾಸು ಇಲಾಖೆ ರಾಜ್ಯ ಸಚಿವ ಪಂಕಜ್ ಚೌಧರಿ ಮತ್ತು ಮುಖ್ಯ ಆರ್ಥಿಕ ಸಲಹೆಗಾರ ಡಾ ವಿ ಅನಂತ ನಾಗೇಶ್ವರನ್ ಸಚಿವರಿಗೆ ಸಾಥ್ ನೀಡಿದ್ದಾರೆ.
Union Finance Minister Nirmala Sitharaman and MoS Finance Pankaj Chaudhary meet President Droupadi Murmu at Rashtrapati Bhavan. The #UnionBudget2025 will be presented at the Parliament today. pic.twitter.com/yhU0UCM1v3
— ANI (@ANI) February 1, 2025
ಬಿಳಿ ರೇಷ್ಮೆ ಸೀರೆಯನ್ನು ಧರಿಸಿದ್ದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ದಾಖಲೆಗಳನ್ನು ಹೊಂದಿದ ಟ್ಯಾಬ್ಲೆಟ್ ನ್ನು ಮಾಧ್ಯಮಗಳಿಗೆ ಪ್ರದರ್ಶಿಸಿದ್ದಾರೆ. ಚಿನ್ನದ ಬಣ್ಣದ ರಾಷ್ಟ್ರೀಯ ಲಾಂಛನವನ್ನು ಹೊಂದಿರುವ ಕೆಂಪು ಕವರ್ ನೊಳಗೆ ಟ್ಯಾಬ್ಲೆಟ್ ನ್ನು ಭದ್ರತೆಯಿಂದ ಇರಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಹಣಕಾಸು ಮಂತ್ರಿಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಇದುವರೆಗೆ 7 ಬಜೆಟ್ ಮಂಡಿಸಿದ್ದಾರೆ. ಇಂದು 8ನೇ ಬಜೆಟ್ ಮಂಡಿಸಿ ದಾಖಲೆ ಬರೆಯಲಿದ್ದಾರೆ. 2019, 2020, 2021, 2022, 2023, 2024 (ಮಧ್ಯಂತರ ಬಜೆಟ್), 2024 (ಪೂರ್ಣ ಬಜೆಟ್) ಅವಧಿಯಲ್ಲಿ ಬಜೆಟ್ ಮಂಡಿಸಿದ್ದಾರೆ
