ನವದೆಹಲಿ: ಮುಂದಿನ ಹಣಕಾಸು ವರ್ಷ(2020-21) ಬರೋಬ್ಬರಿ 15 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲ ವಿತರಣೆಯ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸಂಸತ್ತಿನಲ್ಲಿ ಬಜೆಟ್ ಮಂಡಿಸುತ್ತ ಈ ವಿಚಾರ ಹೇಳಿದ್ದು, ನಬಾರ್ಡ್ನ ರೀಫೈನಾನ್ಸ್ ಸ್ಕೀಮ್ ಕೂಡ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಭಾರತೀಯ ರೈಲ್ವೆ ಪಿಪಿಪಿ(ಪಬ್ಲಿಕ್-ಪ್ರೈವೇಟ್ ಪಾರ್ಟ್ನರ್ಷಿಪ್) ಮಾದರಿಯಲ್ಲಿ ಕಿಸಾನ್ ರೈಲ್ ಅನ್ನು ಆರಂಭಿಸಲಿದೆ. ಇದು ಬೇಗನೆ ಹಾಳಾಗುವ ಕೃಷಿ ಉತ್ಪನ್ನಗಳ ಸಾಗಣೆಗೆ ಇದು ಕೋಲ್ಡ್ ಸಪ್ಲೈ ಚೇನ್ ಆಗಿ ಬಳಕೆಯಾಗಲಿದೆ ಎಂದು ಅವರು ವಿವರಿಸಿದರು.
ಇದರ ಜತೆಗೆ, ಕೃಷಿ ಉಡಾನ್ ಎಂಬ ಯೋಜನೆಯನ್ನೂ ನಾಗರಿಕ ವಿಮಾನ ಯಾನ ಸಚಿವಾಲಯ ಆರಂಭಿಸಲಿದೆ. ಕೃಷಿ ಉತ್ಪನ್ನವನ್ನು ರಾಷ್ಟ್ರಮಟ್ಟ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಾಗಿಸಲು ಈ ಯೋಜನೆ ನೆರವಾಗಲಿದೆ ಎಂದರು.
ಕ್ಲಸ್ಟರ್ ಆಧಾರದಲ್ಲಿ ಒಂದು ಜಿಲ್ಲೆಯಲ್ಲಿ ಒಂದು ತೋಟಗಾರಿಕೆ ಬೆಳೆ ಎಂಬ ಮಾದರಿಯ ಯೋಜನೆಯನ್ನು ಸರ್ಕಾರ ಉತ್ತೇಜಿಸಲಿದೆ. ಈ ರೀತಿಯ ಪ್ರಯೋಗದಿಂದ ಆಹಾರ ಧಾನ್ಯಗಳ ಉತ್ಪಾದನೆ 311 ಎಂಟಿ ದಾಟಿದೆ ಎಂದು ಅವರು ಹೇಳಿದರು.
ಅದೇ ರೀತಿ, ಸಮುದ್ರ ಮೀನುಗಾರಿಕೆ ಸಂರಕ್ಷಣೆ, ಕೃಷಿ ಉತ್ಪನ್ನ ಉಗ್ರಾಣ ಸೌಕರ್ಯ ವೃದ್ಧಿಗೆ ಸ್ವ ಸಹಾಯ ಸಂಘಗಳಿಗೆ ಅನುವು ಮಾಡಿಕೊಡುವ ಕ್ರಮವನ್ನೂ ಸರ್ಕಾರ ಮಾಡಲಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…