Featured

ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಜಾರಿ : 10 ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಉಲ್ಲೇಖ – vishwanews24

ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಜಾರಿ ; 10 ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಉಲ್ಲೇಖ

ಬೆಂಗಳೂರು: ಪದೇಪದೇ ಪಕ್ಷದ ನಾಯಕತ್ವದ ಕುರಿತು ಮುಜುಗರ ತರುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಕೇಂದ್ರ ಬಿಜೆಪಿ ಶಿಸ್ತುಸಮಿತಿ  ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ಈ ಮೂಲಕ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆ ಯತ್ನಾಳ್ ವಿರುದ್ಧ ಬಿಜೆಪಿ ಹೈಕಮಾಂಡ್ ಕ್ರಮಕ್ಕೆ ಮುಂದಾಗಿದೆ. ಹತ್ತು ದಿನಗಳೊಳಗೆ ಸ್ಪಷ್ಟೀಕರಣ ಕೊಡದಿದ್ದಲ್ಲಿ ನಿಮ್ಮ ತಪ್ಪು ನೀವೇ ಒಪ್ಪಿಕೊಂಡಂತೆ. ನಾವು ಕ್ರಮಕ್ಕೆ ಮುಂದಾಗಲು ನಿಮ್ಮ ಒಪ್ಪಿಗೆ ಇದೆಯೆಂದು ಭಾವಿಸುತ್ತೇವೆ. ಈ ಹಿಂದೆಯೂ ಹಲವು ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ತಪ್ಪು ಸರಿಪಡಿಸಿಕೊಳ್ಳೋದಾಗಿ ಭರವಸೆ ಕೊಟ್ಟಿದ್ದಿರಿ. ಆದರೆ ಯಾವುದೂ ಬದಲಾವಣೆ ಆಗಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಹೈಕಮಾಂಡ್ ನಮ್ಮ ಪರ ಇದೆ ಎನ್ನುತ್ತಿದ್ದ ಯತ್ನಾಳ್ ತಂಡಕ್ಕೆ ಭಾರೀ ಹಿನ್ನಡೆಯಾಗಿದ್ದು, ಸದ್ಯಕ್ಕೆ ವಿಜಯೇಂದ್ರ ಮೇಲುಗೈ ಸಾಧಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ನೀಡಿದ್ದ ಬಹಿರಂಗ ಹೇಳಿಕೆಗಳ ಕುರಿತು ಹೈಕಮಾಂಡ್ ಗರಂ ಆಗಿದೆ. ಇದೀಗ ಶೋಕಾಸ್ ನೊಟೀಸ್  ಜಾರಿಯಾದ ಹಿನ್ನೆಲೆ ಯತ್ನಾಳ್ ಶೋಕಾಸ್ ನೊಟೀಸ್‌ಗೆ ಉತ್ತರ ಕೊಡುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಉತ್ತರ ಕೊಡುತ್ತೇನೆ. ಹಾಗೆಯೇ ರಾಜ್ಯ ಬಿಜೆಪಿಯ ವಸ್ತುಸ್ಥಿತಿಯನ್ನೂ ವರಿಷ್ಠರಿಗೆ ತಿಳಿಸೋದಾಗಿ ಯತ್ನಾಳ್ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನು ಸೋಮವಾರ ಜೆಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ಅವರಿಗೆ ವಕ್ಫ್ ವಿರೋಧಿ ಜನಜಾಗೃತಿ ವರದಿ ಸಲ್ಲಿಸುವ ಸಲುವಾಗಿ ಭಾನುವಾರವೇ ಯತ್ನಾಳ್ ದೆಹಲಿಗೆ ತೆರಳಿದ್ದಾರೆ. ಇಂದು (ಸೋಮವಾರ) ಉಳಿದ ರೆಬೆಲ್ ನಾಯಕರು ಯತ್ನಾಳ್‌ರನ್ನು ಕೂಡಿಕೊಳ್ಳಲಿದ್ದಾರೆ.‌

Vishwa News 24

Recent Posts

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

42 minutes ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

2 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

2 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

2 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

2 hours ago

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ – vishwanews24

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…

3 hours ago