ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಮೊದಲ ಬೃಹತ್ ಸಂಪುಟ ಪುರ್ನರಚನೆಯ ಮುನ್ನ ಸಚಿವರಾದ ಡಿವಿ ಸದಾನಂದಗೌಡ ಸೇರಿದಂತೆ ಸಂತೋಷ್ ಗಂಗ್ವಾರ್, ರಮೇಶ್ ಪೋಖ್ರಿಯಾಲ್ ನಿಶಾಂಕ್ ಹಾಗೂ ದೇಬಶ್ರೀ ಚೌಧರಿ ಅವರು ಬುಧವಾರ ರಾಜೀನಾಮೆ ನೀಡಿದ್ದಾರೆ.
ಜ್ಯೋತಿರಾಧಿತ್ಯ ಸಿಂಧಿಯಾ ಸೇರಿದಂತೆ ಸರ್ಬಾನಂದ ಸೋನೊವಾಲ್, ನಾರಾಯಣ್ ರಾಣೆ ಹಾಗೂ ಪಶುಪತಿನಾಥ್ ರಾಸ್ ಅವರ ಹೆಸರುಗಳು ನೂತನ ಸಂಪುಟಕ್ಕೆ ಸೇರ್ಪಡೆಯಾಗಲಿವೆ ಎಂದು ಕೇಳಿ ಬರುತ್ತಿದೆ.
ತಮ್ಮ ಸಚಿವ ಸ್ಥಾನಕ್ಕೆ ಕೇಂದ್ರ ಶಿಕ್ಷಣ ಸಚಿವರಾಗಿದ್ದಂತ ರಮೇಶ್ ಪೋಖ್ರಿಯಾಲ್ ಅವರು ರಾಜೀನಾಮೆ ನೀಡಿದ್ದಾರೆ. ಅಲ್ಲದೇ, 43 ನೂತನ ಸಚಿವರು ಇಂದು ಮೋದಿ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಇದು ಅತ್ಯಂತ ಕಿರಿಯ ಕ್ಯಾಬಿನೆಟ್ ಆಗಿರುತ್ತದೆ. ಒಬಿಸಿಗಳು, ಎಸ್ಸಿಗಳು ಹಾಗೂ ಎಸ್ಟಿಗಳ ದಾಖಲೆಯ ಪ್ರಾತಿನಿಧ್ಯ, ಹೆಚ್ಚಿನ ಮಹಿಳಾ ಆಯ್ಕೆಗಳನ್ನು ಹೊಂದಿರುತ್ತದೆ. ಇಂದು ಸಂಜೆ 6 ಗಂಟೆಗೆ ಘೋಷಿಸಲಿರುವ ಹೊಸ ಸಚಿವ ಸಂಪುಟವು, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ಪ್ರಾತಿನಿಧ್ಯದ ಬಗ್ಗೆ ವಿಶೇಷ ಗಮನ ಹರಿಸಲಿದೆ ಎಂದು ಮೂಲಗಳು ತಿಳಿಸಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…