ನವದೆಹಲಿ :ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಬಳಿ ಇರುವ ಹೆಚ್ಚುವರಿ ಬಂಡವಾಳದಲ್ಲಿನ ₹ 1.76 ಲಕ್ಷ ಕೋಟಿ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಲು ಸಮ್ಮತಿಸಿದೆ.
ವಿತ್ತೀಯ ಕೊರತೆ ಹೆಚ್ಚದಂತೆ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರಕಾರ ಆರ್‌ಬಿಐ ಜತೆ ಹೆಚ್ಚುವರಿ ನಿಧಿಯನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡಿತ್ತು, ಈ ಕಾರಣಕ್ಕಾಗಿ ಆರ್‌ಬಿಐ ಈ ಕೆಲಸ ಮಾಡಿದೆ ಎನ್ನಲಾಗಿದೆ.
ಆರ್‌ಬಿಐನಲ್ಲಿನ ಹೆಚ್ಚುವರಿ ನಿಧಿಯ ವರ್ಗಾವಣೆಗೆ ಸಂಬಂಧಿಸಿದಂತೆ ಬಿಮಲ್ ಜಲನ್ ನೇತೃತ್ವದ ಸಮಿತಿಯನ್ನು ರಚಿಸಲಾಗಿತ್ತು. ನಿಧಿ ವರ್ಗಾವಣೆಗೆ ಸಮಿತಿ ಶಿಫಾರಸು ಮಾಡಿದ್ದು ಅದನ್ನು ಆರ್‌ಬಿಐ ಅಂಗೀಕರಿಸಿದೆ.
ಸದ್ಯ, 2018-19ರ ಹೆಚ್ಚುವರಿ ಮೀಸಲು ನಿಧಿಯಾಗಿ 1.23 ಲಕ್ಷ ಕೋಟಿ ರೂ. ಮತ್ತು ಪರಿಷ್ಕರಿಸಿದ ಆರ್ಥಿಕ ಬಂಡವಾಳ ರೂಪುರೇಷೆ ಅಡಿಯಲ್ಲಿ ಹೆಚ್ಚುವರಿಯಾಗಿರುವ 52,637 ಕೋಟಿ ರೂ. ಅನ್ನು ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ. ಆರ್‌ಬಿಐನಿಂದ ಹೆಚ್ಚುವರಿ ಮೀಸಲು ನಿಧಿಯನ್ನು ಸರಕಾರಕ್ಕೆ ವರ್ಗಾವಣೆ ಮಾಡುವ ವಿಚಾರದಲ್ಲಿ ಕಳೆದ ವರ್ಷ ತೀವ್ರ ವಿವಾದ ಎದ್ದ ಅನಂತರದಲ್ಲಿ ಈ ಬಗ್ಗೆ ಪರಿಶೀಲಿಸಿ ವರದಿ ನೀಡಲು ಪರಿಣತರ ಸಮಿತಿ ರಚಿಸಲಾಗಿತ್ತು. ಸಮಿತಿ ಶಿಫಾರಸಿನ ಮೇರೆಗೆ ಆರ್‌ಬಿಐ ಈ ನಿರ್ಧಾರ ಕೈಗೊಂಡಿದೆ. ಈ ಹಿಂದೆ ಊರ್ಜಿತ್ ಪಟೇಲ್ ಗವರ್ನರ್ ಆಗಿದ್ದಾಗ ಈ ವಿಚಾರ ತೀವ್ರ ಚರ್ಚೆಗೆ ಒಳಪಟ್ಟಿತ್ತು.
ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…
ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…
ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂದಾಗಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ…
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ…
ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…
ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…