ಕರಾವಳಿ ಜಿಲ್ಲೆಯ ನಾಡ ದೋಣಿ ಮೀನುಗಾರರ ಮೀನುಗಾರರ ಬೇಡಿಕೆಗೆ ಸ್ಪಂದಿಸಿ 3540 ಕಿಲೋ ಲೀಟರ್ ಸೀಮೆಎಣ್ಣೆ ಬಿಡುಗಡೆ ಗೊಳಿಸಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಪ್ರಸ್ತುತ 2021-22 ನೇ ಸಾಲಿನಲ್ಲಿ ಈಗಾಗಲೇ 7080 ಕಿಲೋ ಲೀಟರ್ ಸೀಮೆಎಣ್ಣೆ ಬಿಡುಗಡೆ ಗೊಳಿಸಿದ್ದು, ಇದೀಗ ನಾಡದೋಣಿ ಗಾರರ ಬೇಡಿಕೆಯನ್ನು ಪುರಸ್ಕರಿಸಿ ಹೆಚ್ಚುವರಿ ಸೀಮೆಎಣ್ಣೆ ಬಿಡುಗಡೆಗೊಳಿಸಿದೆ.
ರಾಜ್ಯದ 10,100ಕ್ಕೂ ಅಧಿಕ ನಾಡ ದೋಣಿಯ 60,000 ಕ್ಕಿಂತಲೂ ಹೆಚ್ಚಿನ ಮೀನುಗಾರರಿಗೆ ಅನುಕೂಲವಾಗಿದ್ದು, ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಸೀಮೆ ಎಣ್ಣೆ ಬಿಡುಗಡೆ ಗೊಳಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಕೇಂದ್ರ ಪೆಟ್ರೋಲಿಯಂ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಶ್ರೀ ಬಿ ವೈ ರಾಘವೇಂದ್ರ ಹಾಗೂ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಶ್ರೀ ಅಂಗಾರ ರವರಿಗೆ ಧನ್ಯವಾದ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…