ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ನೂತನ ಸಹಕಾರ ಸಚಿವಾಲಯ ರಚನೆಯ ನಿರ್ಧಾರವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.
ದೇಶದ ಸುಮಾರು ೩೫ ಕೋಟಿ ನಾಗರಿಕರು ಸಹಕಾರಿ ಸಂಘಗಳ ಸದಸ್ಯರಾಗಿ ಸಹಕಾರಿ ಕ್ಷೇತ್ರದ ಮೂಲಕ ತಮ್ಮ ಆರ್ಥಿಕ ವ್ಯವಹಾರಗಳನ್ನು ನಡೆಸುತ್ತಿದ್ದು, ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸುತ್ತಿರುವ ಸಹಕಾರಿ ಕ್ಷೇತ್ರಕ್ಕೆ ಇನ್ನಷ್ಟು ಶಕ್ತಿತುಂಬುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಈ ಐತಿಹಾಸಿಕ ನಿರ್ಧಾರ ಅಭಿನಂದನೀಯ.
ಕಳೆದ ಬಜೆಟ್‌ನಲ್ಲಿ ಘೋಷಿಸಿದಂತೆ ಕೇಂದ್ರ ಸರಕಾರದ ಈ ನೂತನ ಸಹಕಾರ ಸಚಿವಾಲಯ ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಆಡಳಿತ, ಕಾನೂನು ಮತ್ತು ನೀತಿ ಚೌಕಟ್ಟನ್ನು ಒದಗಿಸಿ `ಸಹಕಾರದಿಂದ ಸಮೃದ್ಧಿ’ ಎಂಬ ಧ್ಯೇಯವನ್ನು ಸಾಕಾರಗೊಳಿಸುವಲ್ಲಿ ಸಹಕಾರಿಯಾಗಲಿದೆ. ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆಗಳನ್ನು ಸಹಕಾರಿ ಕ್ಷೇತ್ರದ ಮೂಲಕ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…