Featured

ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ಪ್ರತಿಭಟನೆ – vishwanews24

ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ಪ್ರತಿಭಟನೆ

ಉಡುಪಿ: ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಒಂದು ದಿನ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ನಡೆಸಲಾಗುವುದು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ತಿಳಿಸಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಕಾರ್ಮಿಕ ಸಂಘಟನೆ ಬಿಎಂಎಸ್‌ನ್ನು ಹೊರತು ಪಡಿಸಿ ದೇಶದ ಎಲ್ಲಾ 10 ಪ್ರಮುಖ ಕಾರ್ಮಿಕ ಸಂಘಟನೆಗಳು ಈ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಘೋಷಿಸಿವೆ. ಅಲ್ಲದೇ ರೈತ, ಕಾರ್ಮಿಕ, ಕೃಷಿ ಕೂಲಿಕಾರ, ಮಹಿಳಾ, ವಿದ್ಯಾರ್ಥಿ-ಯುವಜನ, ವಿಮಾ, ಬ್ಯಾಂಕ್ ನೌಕರರ ಸಂಘಗಳು, ದಲಿತ ಸಂಘಟನೆಗಳು ಈ ಮುಷ್ಕರಕ್ಕೆ ಬೆಂಬಲವನ್ನು ನೀಡಿವೆ ಎಂದರು.

ಬಿಜೆಪಿ ಸರಕಾರ ಜಾರಿಗೆ ತಂದಿರುವ ಕಾರ್ಮಿಕ ಸಂಹಿತೆ ಜಾರಿಗೊಂಡರೆ ಬಂಡವಾಳಶಾಹಿಗಳಿಗೆ ಅಗ್ಗದ ದರದಲ್ಲಿ ಕಾರ್ಮಿಕರನ್ನು ಮಾರಾಟ ಮಾಡಲು ಅವಕಾಶವಿದೆ. ಇದರಿಂದ ಶ್ರೀಮಂತರು ಹಾಗೂ ಬಡವರ ನಡುವಿನ ಅಸಮಾನತೆ ಇನ್ನಷ್ಟು ಹೆಚ್ಚುವುದು ಖಂಡಿತ ಎಂದು ಸುರೇಶ್ ಕಲ್ಲಾಗರ ಹೇಳಿದರು.

ಜೆಟಿಸಿ ಉಡುಪಿ ಜಿಲ್ಲಾ ಸಮಿತಿಯ ಸಂಚಾಲಕ ಕವಿರಾಜ್ ಕಾಂಚನ್ ಮಾತನಾಡಿ, ಫೆ.12ರಂದು ಉಡುಪಿ ಜಿಲ್ಲೆಯ ಉಡುಪಿ ಅಜ್ಜರಕಾಡು ಹುತಾತ್ಮ ಚೌಕದ ಬಳಿ ಬೆಳಿಗ್ಗೆ 10:30ಕ್ಕೆ, ಕಾರ್ಕಳ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ 10 ಗಂಟೆಗೆ, ಕುಂದಾಪುರದ ಸ್ತ್ರ ಸರ್ಕಲ್ ಬಳಿ ಬೆಳಿಗ್ಗೆ 9:30ಕ್ಕೆ ಹಾಗೂ ಬೈಂದೂರಿನ ತಹಶೀಲ್ದಾರ್ ಕಚೇರಿ ಎದುರು ಬೆಳಿಗ್ಗೆ 9:30ಕ್ಕೆ ಪ್ರತಿಭಟನೆ ನಡೆಯಲಿದೆ ಎಂದರು.

ಉಡುಪಿಯಲ್ಲಿ ಬೆಳಿಗ್ಗೆ 9:30ಕ್ಕೆ ಜೆಸಿಟಿ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಹಳ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಿಂದ ಪ್ರಾರಂಭಗೊಂಡು ಕೆಎಂ ಮಾರ್ಗ, ಕೋರ್ಟ್ ರೋಡ್, ಜೋಡುಕಟ್ಟೆ ಮಾರ್ಗವಾಗಿ ಸಾಗಿ ಅಜ್ಜರಕಾಡು ಹುತಾತ್ಮ ಚೌಕದ ಬಳಿ ಮುಕ್ತಾಯಗೊಂಡು ಅಲ್ಲೇ ಬಹಿರಂಗ ಸಭೆ ನಡೆಯಲಿದೆ ಎಂದರು.

ಸುದ್ದಿಗೋಷಿಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಶಶಿಧರ ಗೊಲ್ಲ, ಇಂಟಕ್‌ನ ಕಿರಣ್ ಹೆಗ್ಡೆ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ವಿ, ಎಐಟಿಯುಸಿಯ ಯು.ಶಿವಾನಂದ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago