ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 395 ಕೋಟಿ ರೂ. ನೆರೆಪರಿಹಾರ ಬಿಡುಗಡೆ -Vishwanews24
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 395 ಕೋಟಿ ರೂ. ನೆರೆಪರಿಹಾರ ಬಿಡುಗಡೆ -Vishwanews24
ಬೆಂಗಳೂರು: ಅತಿವೃಷ್ಟಿ ಮತ್ತು ಪ್ರವಾಹ ಹಾನಿಗೆ ಕೇಂದ್ರ ಸರ್ಕಾರ ಮುಂಗಡ 395 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದೆವು. ಅದರಂತೆ ರಾಜ್ಯದ ಮನವಿಗೆ ಕೂಡಲೇ ಸ್ಪಂದಿಸಿದ ಕೇಂದ್ರ ಸರ್ಕಾರ, ಎಸ್ ಡಿಆರ್ ಎಫ್ ಅಡಿ ₹395.5 ಕೋಟಿ ಹಣವನ್ನು ಈಗ ಮುಂಗಡವಾಗಿ ಬಿಡು ಗಡೆ ಮಾಡಿರುವುದು ಸಂತಸ ತಂದಿದೆ ಎಂದು ಆರ್.ಅಶೋಕ್ ತಿಳಿಸಿದ್ದಾರೆ.
ಎಸ್ ಡಿಆರ್ ಎಫ್ ಅಡಿಯಲ್ಲಿ ಮುಂಗಡ 395 ಕೋಟಿ ರೂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗು ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದೆವು. ಇದೀಗ ರಾಜ್ಯದ ಮನವಿಗೆ ಕೂಡಲೇ ಸ್ಪಂದಿಸಿದ ಕೇಂದ್ರ ಸರ್ಕಾರ, SDRF ಫಂಡ್ ₹395.5 ಕೋಟಿ ಹಣವನ್ನು ಈಗ ಮುಂಗಡವಾಗಿ ಬಿಡುಗಡೆ ಮಾಡಿರುವುದು ಸಂತಸ ತಂದಿದೆ.
— R. Ashoka (ಆರ್. ಅಶೋಕ) (@RAshokaBJP) August 21, 2020
