ನವದೆಹಲಿ : ಕೇಂದ್ರ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಯುರಿಯಾಯೇತರ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರವು ಹೆಚ್ಚಳ ಮಾಡಿದೆ.
ಕೇಂದ್ರ ಸರ್ಕಾರವು ರೈತರ ಕೃಷಿ ಭೂಮಿಗೆ ಅಗ್ಗದ ದರದಲ್ಲಿ ಪೋಷಕಾಂಶಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದು, ಕೇಂದ್ರದ ಬೊಕ್ಕಸಕ್ಕೆ ಪ್ರಸಕ್ತ ಹಣಕಾಸು ವರ್ಷದಲ್ಲಿ 22,875.50 ಕೋಟಿ ರೂ. ಹೊರೆ ಬೀಳಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಹಣಕಾಸು ವ್ಯವಹಾರಗಳ ಸಮಿತಿಯ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಹೊರಬಿದ್ದಿದೆ.
ಫಾಸ್ಟೆಟಿಕ್ ಮತ್ತು ಪೋಟ್ಯಾಸಿಕ್ ರಸಗೊಬ್ಬರಗಳಿಗೆ 2019-20 ರಲ್ಲಿ ಸಬ್ಸಡಿಯನ್ನು ಹೆಚ್ಚಿಸಲಾಗಿದೆ. ಸಬ್ಸಿಡಿಯನ್ನು ಕೆ.ಜಿ. ನೈಟ್ರೋಜನ್ ಗೆ 18.90, ಫಾಸ್ಫರಸ್ ಗೆ 15,11 ರೂ, ಪೋಟಾಷ್ ಗೆ ರೂ. 11.12, ಸಲ್ಫರ್ ಗೆ ರೂ. 3.56 ರೂ. ಹೆಚ್ಚಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…