ಬೆಳಗಾವಿ: “ರಾಜ್ಯದಲ್ಲಿ ಸಂಭವಿಸಿದ ಪ್ರವಾಹಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರವಾಗಿ ಒಂದು ರೂಪಾಯಿಯೂ ಬಂದಿಲ್ಲ” ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋಕಾಕ್ ವಿಧಾನಸಭಾ ಕ್ಷೇತ್ರದ ಪ್ರವಾಹ ಪೀಡಿತ ಕ್ಷೇತ್ರಗಳಿಗೆ ಭೇಟಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ” ಪ್ರವಾಹದಲ್ಲಿ ಗೋಕಾಕಿನ ಎಷ್ಟೋ ಕುಟುಂಬಗಳು ಬೀದಿಪಾಲಾಗಿವೆ. ಆದರೆ ಸರ್ಕಾರ ಸೇರಿದಂತೆ ಯಾವ ಜನಪ್ರತಿನಿಧಿಗಳೂ ಜನರಿಗೆ ಸ್ಪಂದಿಸುತ್ತಿಲ್ಲ. ಸಂತ್ರಸ್ತರಾದವರ ನೆರವಿಗೆ ನಿಲ್ಲುತ್ತಿಲ್ಲ.
ನೆರೆ ಪರಿಹಾರಕ್ಕಾಗಿ ಕೇಂದ್ರ ಸರಕಾರ ನಯಾಪೈಸೆ ಸಹ ಬಿಡುಗಡೆ ಮಾಡುತ್ತಿಲ್ಲ. ಈ ಹಿಂದೆ ಕುಮಾರಸ್ವಾಮಿ ಅವರು ಬರ ನಿರ್ವಹಣೆಗೆ ಸಲ್ಲಿಸಿದ್ದ ಪ್ರಸ್ತಾವನೆಯ 1029 ಕೋಟಿ ರೂ. ಈಗ ಬಿಡುಗಡೆ ಮಾಡಿದೆ. ಇದರಲ್ಲಿ ಪ್ರವಾಹ ಸಂತ್ರಸ್ತರಿಗೆ 10 ಸಾವಿರ ರೂ. ನೀಡಲಾಗುತ್ತಿದೆ ಕೇಂದ್ರ ಸರಕಾರದ ಕಣ್ತೆರೆಸಲು, ನಾನು ಸಂತ್ರಸ್ತರಿಗಾಗಿ ಬೆಂಗಳೂರಿನಲ್ಲಿ ಭಿಕ್ಷೆ ಎತ್ತಲು ತೀರ್ಮಾನಿಸಿದ್ದೇನೆ ಎಂದಿದ್ದಾರೆ.
ನೆರೆ ಹಾವಳಿಯಿಂದ ಬದುಕು ಕಳೆದುಕೊಂಡಿರುವ ನಿರಾಶ್ರಿತರಿಗಾಗಿ ಭಿಕ್ಷೆ ಬೇಡಲು ನಿರ್ಧರಿಸಿದ್ದೇನೆ. ಈ ಮೂಲಕವಾದರೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಣ್ತೆರೆಯಲಿ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…