ಕಾಪು,: ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಸೋಮವಾರ ಪ್ರತಿಭಟನಾ ಸಭೆ ನಡೆಯಿತು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೋಟಾರು ವಾಹನ ಕಾಯ್ದೆ ಜನರನ್ನು ದರೋಡೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಭೀಕರ ಮಳೆಯಿಂದಾದ ಪ್ರವಾಹಕ್ಕೆ ತುತ್ತಾಗಿ ನಿರ್ವಸಿತರಾಗಿರುವ ಜನರ ಸಂಕಷ್ಟಕ್ಕೆ ಸ್ಪಂದಿಸದಿರುವ ಮತ್ತು ಈವರೆಗೆ ಒಂದು ಬಿಡಿಗಾಸು ಪರಿಹಾರವನ್ನ ಘೋಷಿಸದೇ ಭಂಡತನ ಪ್ರದರ್ಶಿಸುತ್ತಿರುವ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರ ನೆರೆ ಸಂತ್ರಸ್ತರನ್ನು ಸಂಪೂರ್ಣ ನಿರ್ಲಕ್ಷ್ಯಿಸಿದೆ. ಉಡುಪಿ ಜಿಲ್ಲೆಯ ಮರಳು ಸಮಸ್ಯೆಯನ್ನು ಪರಿಹರಿಸಲು ಯಾವುದೇ ರೀತಿಯ ಆಸಕ್ತಿ ತೋರಿಸುತ್ತಿಲ್ಲ ಎಂದು ದೂರಿದರು.
ಪ್ರತಿಭಟನೆಗೂ ಮುನ್ನ ವಿದ್ಯಾನಿಕೇತನ್ ಶಾಲೆಯ ಬಳಿಯಿಂದ ರ್ಯಾಲಿ ನಡೆಯಿತು.
ಮಾಜಿ ಸಚಿವ ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೋಪಾಲ ಪೂಜಾರಿ, ಅಶೋಕ್ ಕುಮಾರ್ ಕೊಡವೂರು, ಯು.ಆರ್.ಸಭಾಪತಿ ಮತ್ತಿತರರು ಉಪಸ್ಥಿತರಿದ್ದರು.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…