Featured

ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ಅಡ್ಡಿ ಪಡಿಸಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ : ದೀದಿಗೆ ಸಚಿವೆ ದೇಬಶ್ರೀ ಚೌಧರಿ

ಕೋಲ್ಕತ್ತಾ, : ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ಅಡ್ಡಿ ಪಡಿಸಿದ್ದೇ ಆದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ್ತಷ್ಟು ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆಯ ರಾಜ್ಯ ಸಚಿವೆ ದೇಬಶ್ರೀ ಚೌಧರಿ ಎಚ್ಚರಿಕೆ ನೀಡಿದ್ದಾರೆ.

“ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ರಾಜ್ಯ ಸರ್ಕಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಕೆಲಸ ಮಾಡಬೇಕಾಗುತ್ತದೆ. ಆದರೆ ಅದಕ್ಕೆ ಅಡ್ಡಿಪಡಿಸುವ ಅಥವಾ ಕೇಂದ್ರದ ಯೋಜನೆಗಳು ಬೇಕಿಲ್ಲ ಎಂದು ಅಧಿಕ ಪ್ರಸಂಗ ಮಾಡುವುದಕ್ಕೆ ಮಮತಾ ಬ್ಯಾನರ್ಜಿ ಅವರು ಮುಂದಾದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಚೌಧರಿ ಖಡಕ್ಕಾಗಿ ಹೇಳಿದ್ದಾರೆ.

ಮೇ 30 ರಂದು ಹೊಸ ಎನ್ ಡಿಎ ಸರ್ಕಾರದಲ್ಲಿ ಸಚಿವರಿಗೆ ಖಾತೆ ಹಂಚಿಕೆ ಮಂಆಡಲಾಗಿದ್ದು, ಒಶ್ಚಿ ಬಂಗಾಳದ ರಾಯ್ಗಂಜ್ ಸಂಸದೆ ಚೌಧರಿ ಅವರಿಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆಯ ರಾಜ್ಯ ಸಚಿವೆಯ ಸ್ಥಾನ ನೀಡಲಾಗಿದೆ.

ಕೇಂದ್ರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವಲ್ಲಿ ಮೊದಲಿನಿಂದಲೂ ಸೌಹಾರ್ದತೆ ಇಲ್ಲ. ಇದೀಗ ಲೋಕಸಭೆ ಚುನಾವಣೆಯ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಹುದ್ದೆಯ ಘನತೆಯನ್ನೂ ಮರೆತು ನಡೆದುಕೊಂಡಿರುವುದು ಸಂಬಂಧವನ್ನು ಮತ್ತಷ್ಟು ಬಿಗಡಾಯಿಸಿದೆ.

ಈ ಎಲ್ಲ ಕಾರಣಗಳಿಂದ ಪಶ್ಚಿಮ ಬಂಗಾಳದಲ್ಲಿ ಕೇಂದ್ರದ ಯೋಜನೆಗಳನ್ನು ಜಾರಿಗೆ ತರುವುದು ಸುಲಭವಿಲ್ಲ. ಆದರೆ ನಾನು ಇವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಚೌಧರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago