ಬೆಂಗಳೂರು: “ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಗರು ಜನಾಕ್ರೋಶ ಯಾತ್ರೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ ಪಿಜಿ ಹಾಗೂ ಇಂಧನ ತೈಲಗಳ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ರಾಜ್ಯದಲ್ಲಿ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದು, ಇವರಿಗೆ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಕಪಾಳಮೋಕ್ಷ ಮಾಡಿದೆ. ಬಿಜೆಪಿ ನಾಯಕರು ತಮ್ಮ ಆಕ್ರೋಶವನ್ನು ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಲಿ ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…