Featured

ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳ ಬಗ್ಗೆ ಹೆಚ್ಚಿನ ರೈತರು ಅರಿತುಕೊಂಡರೆ ದೇಶವ್ಯಾಪಿ ಬೆಂಕಿ ಹೊತ್ತಿಕೊಳ್ಳಲಿದೆ : ರಾಹುಲ್‌ ಗಾಂಧಿ -Vishwanews24

ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳ ಬಗ್ಗೆ ಹೆಚ್ಚಿನ ರೈತರು ಅರಿತುಕೊಂಡರೆ ದೇಶವ್ಯಾಪಿ ಬೆಂಕಿ ಹೊತ್ತಿಕೊಳ್ಳಲಿದೆ : ರಾಹುಲ್‌ ಗಾಂಧಿ -Vishwanews24

ತಿರುವನಂತಪುರಂ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳ ಬಗ್ಗೆ ಹೆಚ್ಚಿನ ರೈತರು ಅರಿತುಕೊಂಡರೆ ದೇಶವ್ಯಾಪಿ ಬೆಂಕಿ ಹೊತ್ತಿಕೊಳ್ಳಲಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಕೇರಳದ ವಯನಾಡಿನಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಗುರುವಾರ ಮಾತನಾಡಿರುವ ಅವರು, ‘ಕೇಂದ್ರದ ಮೂರು ಕೃಷಿ ಕಾಯ್ದೆಗಳ ಬಗೆಗಿನ ವಿವರಗಳು ಹೆಚ್ಚಿನ ರೈತರಿಗೆ ಅರ್ಥವಾಗುತ್ತಿಲ್ಲ. ಒಂದು ವೇಳೆ ಅವರಿಗೆ ಅರ್ಥವಾದರೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಆರಂಭಗೊಳ್ಳುತ್ತವೆ. ದೇಶದಾದ್ಯಂತ ಬೆಂಕಿ ಹೊತ್ತಿಕೊಳ್ಳಲಿದೆ’ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

‘ಕೆಲ ವರ್ಷಗಳ ಹಿಂದೆ ರೈತರ ಮೇಲೆ ದಾಳಿ ನಡೆದಿರುವುದನ್ನು ನಾನು ಗಮನಿಸಿದೆ. ಅವರಿಗೆ ಸಂಬಂಧಿಸಿದ ಭೂಮಿಯನ್ನು ವಶಪಡಿಸಿಕೊಳ್ಳುವ ಹುನ್ನಾರ ನಡೆದಿತ್ತು. ಅದೊಂದು ದೊಡ್ಡ ಸಮಸ್ಯೆ ಎಂದು ನಾನು ಅರಿತುಕೊಂಡೆ. ಆ ವಿಚಾರವಾಗಿ ನಾನು ಕಾಂಗ್ರೆಸ್ ಪಕ್ಷದೊಳಗೆ ಚರ್ಚೆಗಳನ್ನು ಪ್ರಾರಂಭಿಸಿದೆ. ಅದರ ಫಲಿತಾಂಶವೇ ಹೊಸ ಭೂಸ್ವಾಧೀನ ಮಸೂದೆ’ ಎಂದು ರಾಹುಲ್‌ ತಿಳಿಸಿದರು.

ಫೇಸ್‌ಬುಕ್‌ನಲ್ಲಿ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳ ಶಿಫಾರಸು ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ: ಮಾರ್ಕ್‌ ಜುಕರ್‌ಬರ್ಗ್ -Vishwanews24

‘ಹಳೆಯ ಬ್ರಿಟಿಷ್‌ ಕಾಯ್ದೆಯನ್ನು ನಾವು ಕಿತ್ತುಹಾಕಿದೆವು. ನಮ್ಮ ರೈತರಿಗೆ ಪರಿಹಾರ ಮತ್ತು ರಕ್ಷಣೆಯನ್ನು ಖಾತರಿಪಡಿಸುವ ಹೊಸ ಕಾಯ್ದೆಯನ್ನು ಜಾರಿಗೆ ತಂದೆವು. ಮೋದಿಯವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಈ ಕಾಯ್ದೆಯನ್ನು ನಾಶಮಾಡಲು ಪ್ರಯತ್ನಿಸಿದರು. ನಾವು ಈ ಬಗ್ಗೆ ಸಂಸತ್ತಿನಲ್ಲಿ ಹೋರಾಟ ನಡೆಸಿದ್ದೇವೆ’ ಎಂದು ಅವರು ತಿಳಿಸಿದರು.

‘ದೇಶದ ಇಂದಿನ ಪರಿಸ್ಥಿತಿಯ ಬಗ್ಗೆ ಎಲ್ಲರಿಗೂ ತಿಳಿಯುತ್ತಿದೆ. ಏನು ನಡೆಯುತ್ತಿದೆ ಎಂಬುದನ್ನು ಎಲ್ಲರೂ ಸ್ಪಷ್ಟವಾಗಿ ಗಮನಿಸುತ್ತಿದ್ದಾರೆ. ಕೇವಲ ಇಬ್ಬರಿಂದ ಮೂವರು ಉದ್ಯಮಿಗಳ ಹಿತ ಕಾಪಾಡುವುದಕ್ಕೋಸ್ಕರ ಪ್ರಧಾನಿ ಮೋದಿ ದೇಶವನ್ನು ನಡೆಸುತ್ತಿದ್ದಾರೆ’ ಎಂದು ರಾಹುಲ್‌ ಟೀಕಾಪ್ರಹಾರ ನಡೆಸಿದ್ದಾರೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

9 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

10 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

14 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

14 hours ago