ತಿರುವನಂತಪುರಂ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳ ಬಗ್ಗೆ ಹೆಚ್ಚಿನ ರೈತರು ಅರಿತುಕೊಂಡರೆ ದೇಶವ್ಯಾಪಿ ಬೆಂಕಿ ಹೊತ್ತಿಕೊಳ್ಳಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಕೇರಳದ ವಯನಾಡಿನಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಗುರುವಾರ ಮಾತನಾಡಿರುವ ಅವರು, ‘ಕೇಂದ್ರದ ಮೂರು ಕೃಷಿ ಕಾಯ್ದೆಗಳ ಬಗೆಗಿನ ವಿವರಗಳು ಹೆಚ್ಚಿನ ರೈತರಿಗೆ ಅರ್ಥವಾಗುತ್ತಿಲ್ಲ. ಒಂದು ವೇಳೆ ಅವರಿಗೆ ಅರ್ಥವಾದರೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಆರಂಭಗೊಳ್ಳುತ್ತವೆ. ದೇಶದಾದ್ಯಂತ ಬೆಂಕಿ ಹೊತ್ತಿಕೊಳ್ಳಲಿದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
‘ಕೆಲ ವರ್ಷಗಳ ಹಿಂದೆ ರೈತರ ಮೇಲೆ ದಾಳಿ ನಡೆದಿರುವುದನ್ನು ನಾನು ಗಮನಿಸಿದೆ. ಅವರಿಗೆ ಸಂಬಂಧಿಸಿದ ಭೂಮಿಯನ್ನು ವಶಪಡಿಸಿಕೊಳ್ಳುವ ಹುನ್ನಾರ ನಡೆದಿತ್ತು. ಅದೊಂದು ದೊಡ್ಡ ಸಮಸ್ಯೆ ಎಂದು ನಾನು ಅರಿತುಕೊಂಡೆ. ಆ ವಿಚಾರವಾಗಿ ನಾನು ಕಾಂಗ್ರೆಸ್ ಪಕ್ಷದೊಳಗೆ ಚರ್ಚೆಗಳನ್ನು ಪ್ರಾರಂಭಿಸಿದೆ. ಅದರ ಫಲಿತಾಂಶವೇ ಹೊಸ ಭೂಸ್ವಾಧೀನ ಮಸೂದೆ’ ಎಂದು ರಾಹುಲ್ ತಿಳಿಸಿದರು.
‘ಹಳೆಯ ಬ್ರಿಟಿಷ್ ಕಾಯ್ದೆಯನ್ನು ನಾವು ಕಿತ್ತುಹಾಕಿದೆವು. ನಮ್ಮ ರೈತರಿಗೆ ಪರಿಹಾರ ಮತ್ತು ರಕ್ಷಣೆಯನ್ನು ಖಾತರಿಪಡಿಸುವ ಹೊಸ ಕಾಯ್ದೆಯನ್ನು ಜಾರಿಗೆ ತಂದೆವು. ಮೋದಿಯವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಈ ಕಾಯ್ದೆಯನ್ನು ನಾಶಮಾಡಲು ಪ್ರಯತ್ನಿಸಿದರು. ನಾವು ಈ ಬಗ್ಗೆ ಸಂಸತ್ತಿನಲ್ಲಿ ಹೋರಾಟ ನಡೆಸಿದ್ದೇವೆ’ ಎಂದು ಅವರು ತಿಳಿಸಿದರು.
‘ದೇಶದ ಇಂದಿನ ಪರಿಸ್ಥಿತಿಯ ಬಗ್ಗೆ ಎಲ್ಲರಿಗೂ ತಿಳಿಯುತ್ತಿದೆ. ಏನು ನಡೆಯುತ್ತಿದೆ ಎಂಬುದನ್ನು ಎಲ್ಲರೂ ಸ್ಪಷ್ಟವಾಗಿ ಗಮನಿಸುತ್ತಿದ್ದಾರೆ. ಕೇವಲ ಇಬ್ಬರಿಂದ ಮೂವರು ಉದ್ಯಮಿಗಳ ಹಿತ ಕಾಪಾಡುವುದಕ್ಕೋಸ್ಕರ ಪ್ರಧಾನಿ ಮೋದಿ ದೇಶವನ್ನು ನಡೆಸುತ್ತಿದ್ದಾರೆ’ ಎಂದು ರಾಹುಲ್ ಟೀಕಾಪ್ರಹಾರ ನಡೆಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…