ಶ್ರೀನಗರ:ಬಿಜೆಪಿ ಸರ್ಕಾರದ 3 ವರ್ಷಗಳ ನಿರಂತರ ಪ್ರಯತ್ನದ ನಂತರ ತ್ರಿವಳಿ ತಲಾಕ್ ಮಸೂದೆಗೆ ಸಂಸತ್ನ ಎರಡೂ ಸದನದಲ್ಲಿ ಅಂಗೀಕಾರ ದೊರೆತಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಕೇಂದ್ರ ಸರ್ಕಾರ ಇಷ್ಟು ತುರ್ತಾಗಿ ಮಸೂದೆ ಅಂಗೀಕರಿಸಿದ್ದು ಏಕೆ ಎಂದು ಕಿಡಿ ಕಾರಿದ್ದಾರೆ.
ಮಂಗಳವಾರ ಪ್ರತಿಪಕ್ಷಗಳ ಕೆಲ ಸದಸ್ಯರ ಕಲಾಪ ಬಹಿಷ್ಕಾರ ಹಾಗೂ ಗೈರಿನ ಲಾಭ ಪಡೆದ ಬಿಜೆಪಿ 99:84 ಮತದಲ್ಲಿ ಮುಸ್ಲಿಂ ಮಹಿಳಾ ಹಕ್ಕುಗಳ ಸುರಕ್ಷತೆ ವಿಧೇಯಕಕ್ಕೆ (ದಿಢೀರ್ ತ್ರಿವಳಿ ತಲಾಕ್ ನಿಷೇಧ) ಒಪ್ಪಿಗೆ ಪಡೆಯುವಲ್ಲಿ ಯಶಸ್ವಿಯಾಗಿತ್ತು.
ಮಸೂದೆಗೆ ಅಂಗೀಕಾರ ದೊರೆತ ನಂತರ ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದು, ಸುಪ್ರೀಂ ಕೋರ್ಟ್ ಈಗಾಗಲೇ ತ್ರಿವಳಿ ತಲಾಕ್ ಅನ್ನು ಕಾನೂನು ಬಾಹಿರ ಎಂದು ಆದೇಶ ನೀಡಿದೆ. ಇದರ ಹೊರತಾಗಿಯೂ ಕೇಂದ್ರ ಸರ್ಕಾರ ತ್ರಿವಳಿ ತಲಾಕ್ ಮಸೂದೆಗೆ ಅಂಗೀಕಾರ ಪಡೆದಿದ್ದು ಏಕೆ ಎಂಬುದು ತಿಳಿಯುತ್ತಿಲ್ಲ. ಪ್ರಸ್ತುತ ಸಂದರ್ಭದಲ್ಲಿ ಈ ಮಸೂದೆಗೆ ಹೆಚ್ಚಿನ ಒತ್ತು ನೀಡಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…