Featured

ಕೇಂದ್ರ ಸರ್ಕಾರ ನಾರಾಯಣ ಗುರು ಸ್ತಬ್ಧಚಿತ್ರ ತಿರಸ್ಕರಿಸಿಲ್ಲ : ಪ್ರಲ್ಹಾದ ಜೋಶಿ ಸ್ಪಷ್ಟನೆ – Vishwanews24

ಕೇಂದ್ರ ಸರ್ಕಾರ ನಾರಾಯಣ ಗುರು ಸ್ತಬ್ಧಚಿತ್ರ ತಿರಸ್ಕರಿಸಿದೆ ಹಾಗೂ ಶಂಕರಾಚಾರ್ಯರ ಸ್ತಬ್ಧಚಿತ್ರ ಕಳಿಸುವಂತೆ ಸೂಚಿಸಿದೆ ಎಂಬುದು ಸುಳ್ಳು  ..

2018 ಮತ್ತು 2021ರಲ್ಲಿ ಕೇರಳದ ಸ್ತಬ್ಧಚಿತ್ರಗಳು ಆಯ್ಕೆಯಾಗಿದ್ದವು ..

ಈ ಸಲ ಬೇರೆ ರಾಜ್ಯಗಳಿಗೆ ಅವಕಾಶ ನೀಡಲಾಗಿದೆ..

ಕಾಂಗ್ರೆಸ್ ಆರಂಭಿಸಿದ ಈ ನಿಯಮವನ್ನು ಇಂದಿಗೂ ಪಾಲಿಸಿಕೊಂಡು ಬರಲಾಗುತ್ತಿದೆ..

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ ..

ಹುಬ್ಬಳ್ಳಿ: ‘ಗಣರಾಜ್ಯೋತ್ಸವ ಅಂಗವಾಗಿ ಕೇರಳ ರಾಜ್ಯ ಕಳಿಸಿದ್ದ ನಾರಾಯಣ ಗುರು ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಹಾಗೂ ಶಂಕರಾಚಾರ್ಯರ ಸ್ತಬ್ಧಚಿತ್ರ ಕಳಿಸುವಂತೆ ಸೂಚಿಸಿದೆ ಎಂಬುದು ಸುಳ್ಳು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ದೇಶದಲ್ಲಿ 36 ರಾಜ್ಯಗಳಿವೆ. ಪ್ರತಿ ವರ್ಷ 12 ಸ್ತಬ್ಧಚಿತ್ರಗಳನ್ನು ಗಣರಾಜ್ಯೋತ್ಸವಕ್ಕೆ ಆಯ್ಕೆ ಮಾಡಲಾಗುತ್ತದೆ. ಇದಕ್ಕೆ ಲಿಖಿತವಾದ ಯಾವುದೇ ನಿಯಮಗಳಿಲ್ಲ’ ಎಂದರು.

‘ಆದರೂ, ಮೂರು ವರ್ಷಕ್ಕೊಮ್ಮೆ ಪ್ರತಿ ರಾಜ್ಯದ ಸ್ತಬ್ಧಚಿತ್ರಗಳು ಆಯ್ಕೆಯಾಗುವುದು ಅಲಿಖಿತ ನಿಯಮ. 2018 ಮತ್ತು 2021ರಲ್ಲಿ ಕೇರಳದ ಸ್ತಬ್ಧಚಿತ್ರಗಳು ಆಯ್ಕೆಯಾಗಿದ್ದವು. ಹಾಗಾಗಿ, ಈ ಸಲ ಬೇರೆ ರಾಜ್ಯಗಳಿಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಆರಂಭಿಸಿದ ಈ ನಿಯಮವನ್ನು ಇಂದಿಗೂ ಪಾಲಿಸಿಕೊಂಡು ಬರಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.

‘ನಾರಾಯಣ ಗುರು ಹಾಗೂ ಶಂಕರಾಚಾರ್ಯ ಇಬ್ಬರೂ ಸಮಾಜ ಸುಧಾರಣೆಗೆ ಮಹತ್ತರ ಕೊಡುಗೆ ನೀಡಿದ್ದಾರೆ. ನಾರಾಯಣ ಗುರು ಅವರ ಪ್ರತಿಮೆ ಒಡೆದು ಹಾಕಿದ್ದ ಕಮ್ಯುನಿಸ್ಟ್ ಸರ್ಕಾರವೇ ಈ ವಿಷಯದಲ್ಲಿ ರಾಜಕಾರಣ ಮಾಡಲು ಮುಂದಾಗಿದೆ. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಈ ಬೆಳವಣಿಗೆ ಕುರಿತು ತಪ್ಪು ಹೇಳಿಕೆ ನೀಡುವುದಕ್ಕೂ ಮುಂಚೆ, ಸತ್ಯಾಸತ್ಯತೆ ಅರಿಯಬೇಕು’ ಎಂದರು.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

36 seconds ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 hour ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 hour ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

2 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

2 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago