Featured

ಕೇಂದ್ರ ಸರ್ಕಾರ  ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದರೆ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುತ್ತೇವೆ -Vishwanews24

ಕೇಂದ್ರ ಸರ್ಕಾರ  ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದರೆ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುತ್ತೇವೆ -Vishwanews24

ನವದೆಹಲಿ: ‘ಕೇಂದ್ರ ಸರ್ಕಾರ  ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದರೆ ಮಾತ್ರ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುತ್ತೇವೆ’ ಎಂದು ಅಖಿಲ ಭಾರತ ಕಿಸಾನ್ ಸಭಾದ (ಎಐಕೆಎಸ್‌) ಪದಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕಾಯ್ದೆ ರದ್ದುಗೊಳಿಸಬೇಕೆಂಬ’ ನಿಲುವಿನಿಂದ ರೈತರು ಹಿಂದೆ ಸರಿಯದ ಕಾರಣ, ಪ್ರತಿಭಟನಾಕಾರರು ಮತ್ತು ಸರ್ಕಾರದ ನಡುವೆ ಗುರುವಾರ ನಡೆದ ನಾಲ್ಕನೇ ಸುತ್ತಿನ ಮಾತುಕತೆಯೂ ವಿಫಲಗೊಂಡಿದೆ. ಐದನೇ ಸುತ್ತಿನ ಮಾತುಕತೆ ಆರಂಭವಾಗುವ ಮುನ್ನ ಮಾತನಾಡಿದ ಎಐಕೆಎಸ್‌ ಸಂಘಟನೆಯ ವಿತ್ತ ಕಾರ್ಯದರ್ಶಿ ಕೃಷ್ಣಪ್ರಸಾದ್ ‘ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಕಾಯ್ದೆಗಳನ್ನು ರದ್ದುಪಡಿಸಿದರೆ ಮಾತ್ರ, ಪ್ರತಿಭಟನೆ ನಿಲ್ಲಿಸುತ್ತೇವೆ‘ ಎಂದು ಸ್ಪಷ್ಟಪಡಿಸಿದ್ದಾರೆ.

‘ಸರ್ಕಾರ ಕಾಯ್ದೆಗಳನ್ನು ರದ್ದುಗೊಳಿಸುವ ಪ್ರಸ್ತಾವನೆಯನ್ನು ಸಂಸತ್ತಿಗೆ ಕೊಂಡೊಯ್ಯಬೇಕು. ಸದನ ಸಮಿತಿಯ ಎದುರು ಇಟ್ಟು ಚರ್ಚಿಸಬೇಕು. ಕಾಯ್ದೆಗಳನ್ನು ರದ್ದುಗೊಳಿಸುವುದು ಬಿಟ್ಟು ಬೇರೆ ಯಾವುದಕ್ಕೂ ನಾವು ಮಣಿಯುವುದಿಲ್ಲ’ ಎಂದು ಕೃಷ್ಣಪ್ರಸಾದ್ ತಿಳಿಸಿದ್ದಾರೆ.

ಇದೇ ವೇಳೆ ‘ರೈತ ವಿರೋಧಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತ ನಾಯಕರು, ಕಾರ್ಯಕರ್ತರನ್ನು ಬೆದರಿಸಲು ಮೋದಿ ಸರ್ಕಾರ ದೆಹಲಿ ಪೊಲೀಸರನ್ನು ಬಳಸಿಕೊಳ್ಳುತ್ತಿದೆ. ಈ ಮೂಲಕ ಹೇಡಿತನ ಪ್ರದರ್ಶಿಸುತ್ತಿದೆ. ಇದನ್ನು ಎಐಕೆಎಸ್ ಬಲವಾಗಿ ಖಂಡಿಸುತ್ತದೆ‘ ಎಂದು ರೈತ ಸಂಘ ಟ್ವೀಟ್ ಮಾಡಿದೆ.

ಹಾಗೆಯೇ, ‘ಭಾರತದಾದ್ಯಂತ ಪ್ರತಿಭಟನಾ ನಿರತ ರೈತರ ಮೇಲೆ ದಾಖಲಾದ ಪ್ರಕರಣಗಳನ್ನು ಸರ್ಕಾರ ಬೇಷರತ್ತಾಗಿ ಹಿಂತೆಗೆದುಕೊಳ್ಳಬೇಕು‘ ಎಂದು ಎಐಕೆಎಸ್ ಒತ್ತಾಯಿಸಿದೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago