ನವದೆಹಲಿ, : ತೈಲ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರವನ್ನು ಲೇವಡಿ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರವು ತೈಲ ಬೆಲೆಯನ್ನು ಏರಿಕೆ ಮಾಡದ ದಿನವೇ ಅಪರೂಪ” ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕೇಂದ್ರವು ತೈಲ ಬೆಲೆ ಏರಿಕೆ ಮಾಡದ ದಿನ ಅಪರೂಪವಾಗಿದೆ. ಪ್ರತಿ ದಿನವೂ ತೈಲ ಬೆಲೆಯನ್ನು ಹೆಚ್ಚಿಸಬೇಕು ಎನ್ನುವ ನಿಯಮವನ್ನು ಇದು ಸಾಬೀತುಪಡಿಸುತ್ತದೆ” ಎಂದಿದ್ದಾರೆ.
ದೇಶದಲ್ಲಿ ದಿನೇ ದಿನೇ ತೈಲ ಬೆಲೆ ಏರಿಕೆಯಾಗುತ್ತಿದ್ದು, ಕರ್ನಾಟಕದ ಹಲವು ನಗರಗಳಲ್ಲಿ ಪೆಟ್ರೋಲ್ ದರ 100 ರೂ. ಕ್ಕಿಂತ ಹೆಚ್ಚಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 27 ಪೈಸೆ ಹಾಗೂ ಡೀಸೆಲ್ ದರ 28 ಪೈಸೆಗೆ ಹೆಚ್ಚಿದೆ.
ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ 100 ರೂ. ಹೆಚ್ಚಿದ್ದು, ಡೀಸೆಲ್ ಲೀಟರ್ ಬೆಲೆ 92.97 ರೂ. ಏರಿಕೆಯಾಗಿದೆ. ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 96.93 ರೂ. ಆಗಿದ್ದು, ಡೀಸೆಲ್ ದರ 87.69 ಆಗಿದೆ. ಮುಂಬೈಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ 103.08 ರೂ ಆಗಿದ್ದು, ಡೀಸೆಲ್ ಬೆಲೆ 95.14 ರೂ. ಗೆ ಏರಿಕೆಯಾಗಿದೆ.
ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪೆನಿಗಳ ದರ ಏರಿಕೆ ಮಾಡಿದ್ದು, ಕರ್ನಾಟಕ, ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಏಳು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಶತಕ ತಲುಪಿದೆ.
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…