Featured

ಕೇಂದ್ರ ಸರ್ಕಾರ ರೈತರ ಪ್ರತಿಭಟನೆ ಕೊನೆಗೊಳಿಸಲು ಸೌಹಾರ್ದಯುತ ದಾರಿ ಕಂಡುಕೊಳ್ಳಬೇಕಾದ ಅವಶ್ಯಕತೆಯಿದೆ : ಬಾಬಾ ರಾಮ್ ದೇವ್ -Vishwanews24

ಕೇಂದ್ರ ಸರ್ಕಾರ ರೈತರ ಪ್ರತಿಭಟನೆ ಕೊನೆಗೊಳಿಸಲು ಸೌಹಾರ್ದಯುತ ದಾರಿ ಕಂಡುಕೊಳ್ಳಬೇಕಾದ ಅವಶ್ಯಕತೆಯಿದೆ : ಬಾಬಾ ರಾಮ್ ದೇವ್ -Vishwanews24

ಭೋಪಾಲ್: “ಕೇಂದ್ರ ಸರ್ಕಾರ ದೆಹಲಿಯಲ್ಲಿನ ರೈತರ ಪ್ರತಿಭಟನೆ ಕೊನೆಗೊಳಿಸಲು ಸೌಹಾರ್ದಯುತ ದಾರಿ ಕಂಡುಕೊಳ್ಳಬೇಕಾದ ಅವಶ್ಯಕತೆಯಿದೆ” ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ರೈತರು ಕೈಗೊಂಡಿರುವ ಹೋರಾಟ ಶುಕ್ರವಾರ 30ನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿ ಗಡಿಗಳಲ್ಲಿ ಪ್ರತಿಭಟನೆ ಆರಂಭವಾಗಿ ತಿಂಗಳು ಕಳೆಯುತ್ತಿದ್ದರೂ ಬಿಕ್ಕಟ್ಟಿಗೆ ಅಂತ್ಯ ಸಿಕ್ಕಿಲ್ಲ. ಈ ಕುರಿತು ಉತ್ತರ ಪ್ರದೇಶದ ಸಹರನ್ಪುರದಲ್ಲಿ ಮಾತನಾಡಿದ ಬಾಬಾ ರಾಮ್ ದೇವ್, “ಈ ಸುದೀರ್ಘ ಪ್ರತಿಭಟನೆ ದೇಶಕ್ಕೆ ಒಳಿತಾಗುವಂಥದ್ದಲ್ಲ” ಎಂದು ಹೇಳಿದ್ದಾರೆ.

ಕೊರೊನಿಲ್’ನಿಂದ 3 ದಿನದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ: ಪತಂಜಲಿ ರೈತರು ಕೈಗೊಂಡಿರುವ ಈ ಪ್ರತಿಭಟನೆ ಅತಿ ಸೂಕ್ಷ್ಮ ವಿಚಾರವಾಗಿದೆ. ಇದು ಇನ್ನಷ್ಟು ಮುಂದುವರೆಯಬಾರದು. ಕೃಷಿ ಕ್ಷೇತ್ರದ ಬೆಳವಣಿಗೆಯೊಂದಿಗೆ ರೈತರ ಗೌರವವನ್ನೂ ಕಾಪಾಡುವಂತೆ ಸರ್ಕಾರ, ರೈತರು ಎರಡೂ ಕಡೆಯಿಂದ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ. ಸರ್ಕಾರವೂ ರೈತರ ಉತ್ಪಾದನೆ ಹಾಗೂ ಬೆಳೆಗಳ ಬೆಲೆ ಹೆಚ್ಚಿಸುವ ಕುರಿತು ಚಿಂತಿಸಬೇಕಿದೆ ಎಂದಿದ್ದಾರೆ.

ಗುರುವಾರವಷ್ಟೆ, ಕೃಷಿ ಕಾಯ್ದೆಗಳ ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ಮತ್ತೊಮ್ಮೆ ರೈತರಿಗೆ ಪತ್ರ ಬರೆದಿದೆ. ಸರ್ಕಾರ ಕಾಯ್ದೆಗಳ ತಿದ್ದುಪಡಿ ಮಾಡುವ ಪ್ರಸ್ತಾವವಿಟ್ಟಿದ್ದರೆ, ರೈತರು ಕಾಯ್ದೆ ರದ್ದತಿಗೆ ಒತ್ತಾಯಿಸುತ್ತಿದ್ದಾರೆ. ಈ ಬೆಳವಣಿಗೆಯ ನಡುವೆ ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಅಡಿಯಲ್ಲಿ ಶುಕ್ರವಾರ ಏಳನೇ ಕಂತಿನ ಹಣ ಬಿಡುಗಡೆಯಾಗಲಿದ್ದು, 9 ಕೋಟಿ ರೈತರ ಖಾತೆಗೆ 18000 ಕೋಟಿ ರೂಪಾಯಿಗಳನ್ನು ಕಳುಹಿಸಲಾಗುತ್ತದೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ 6 ರಾಜ್ಯಗಳ ನೂರಾರು ರೈತರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago