KPCC President, Dinesh Gundu Rao addressing press media at KPCC office, in Bengaluru on Wednesday 3rd April 2019 Pics: www.pics4news.com
ಮಂಗಳೂರು: ಕೇಂದ್ರ ಸರ್ಕಾರ ಅಂಗೀಕರಿಸಿರುವ ವಕ್ಸ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಯಾರನ್ನೂ ಗಮನಕ್ಕೆ ತೆಗೆದುಕೊಳ್ಳದೆ ಕೇಂದ್ರ ಸರ್ಕಾರ ವಕ್ಸ್ ವಿಚಾರದಲ್ಲಿ ದಬ್ಬಾಳಿಕೆ ನಡೆಸುತ್ತಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಕ್ಸ್ ತಿದ್ದುಪಡಿ ಮಸೂದೆ ಜಾರಿ ವಿಚಾರದಲ್ಲಿ ವಕ್ಸ್ನಲ್ಲಿ ತಪ್ಪಾಗಿದ್ದರೆ ಅಥವಾ ಭೂಮಿದುರುಪಯೋಗ ಆಗಿದ್ದರೆ ಸರಿ, ಆದರೆ ಕಾನೂನಿಗೆ ಅದಕ್ಕೂ ಸಂಬಂಧ ಇಲ್ಲ. ಈ ಕಾನೂನು ಸಂವಿಧಾನ ವಿರೋಧಿಯಾಗಿದೆ. ವಕ್ಸ್ ವಿಚಾರ ಸೂಕ್ಷ್ಮವಾಗಿದ್ದು, ಇದರಲ್ಲಿ ದ್ವೇಷ ಸಾಧಿಸುವಂಥದ್ದು ಸರಿಯಲ್ಲ. ರಾಜ್ಯದ ಭೂಮಿಯಲ್ಲಿ ಹಿಂದೂ ಧರ್ಮದ ಟ್ರಸ್ಟ್ಗಳು ಕೂಡ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಇದೆ. ವಕ್ಸ್ ಕೂಡ ಕೆಲವು ರಾಜ್ಯ ಸರ್ಕಾರ ವ್ಯಾಪ್ತಿಯಲ್ಲಿ ಇದೆ. ಇಂತಹ ಕ್ರಮಗಳು ಭ್ರಷ್ಟಾಚಾರದಿಂದ ಕೂಡಿದೆ ಎಂದು ಆರೋಪಿಸಿದರು.
ಕೋವಿಡ್ ಅಕ್ರಮದ ಬಗ್ಗೆ ನ್ಯಾ.ಡಿ.ಕುನ್ನಾ ವರದಿ ಬಗ್ಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಈ ಬಗ್ಗೆ ಉಪಸಮಿತಿಯಲ್ಲಿ
ಚರ್ಚೆಗಳಾಗಿದೆ. ಇಲಾಖೆಗಳಲ್ಲಿ ವಿಚಾರಣೆ ಮಾಡಲು ಹೇಳಿದ್ದೇನೆ. ವಿಚಾರಣೆ ಪೂರ್ಣಗೊಂಡ ಬಳಿಕ ಸ್ಪಷ್ಟ ಚಿತ್ರಣ ಲಭಿಸುತ್ತದೆ. ಕೋವಿಡ್ ಅಕ್ರಮದ ತನಿಖೆಯನ್ನು ಎಸ್ಐಟಿಗೂ ವಹಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಶೋಕಾಸ್ ನೋಟೀಸ್ ನೀಡಿ ವಿಚಾರಣೆ ನಡೆಸಲಾಗಿದೆ. ಎಲ್ಲ ವಿಚಾರಣೆ ನಂತರ ಮುಂದಿನ ಕ್ರಮದಬಗ್ಗೆ ಪರಿಶೀಲಿಸಲಾಗುವುದು ಎಂದರು.
ಮಡಿಕೇರಿ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ನನಗೆ ಪೂರ್ತಿ ಮಾಹಿತಿ ಇಲ್ಲ, ಮಾಹಿತಿ ತಿಳಿದು ಪ್ರತಿಕ್ರಿಯೆ ನೀಡುತ್ತೇನೆ. ಯಾವುದೇ ಪ್ರಕರಣ ಕಾನೂನು ಪ್ರಕಾರವೇ ಮುಂದುವರಿಯಬೇಕು. ಎಲ್ಲವನ್ನೂ ಕಾನೂನಿನ ಅಡಿಯಲ್ಲೇ ಮಾಡಬೇಕಾಗುತ್ತದೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವಂಥದ್ದು ಏನೂ ಇಲ್ಲ. ಇವೆಲ್ಲಾ ಗಂಭೀರ ಮತ್ತು ಸೂಕ್ಷ್ಮವಾದ ವಿಷಯಗಳು, ಒಂದೇ ಸಮನೆ ಪ್ರತಿಕ್ರಿಯೆ ನೀಡಲು
ಆಗುವುದಿಲ್ಲ ಎಂದರು
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…