ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್ಬಿಐ ಹೆಸರು ಹೇಳಿಕೊಂಡು ಬ್ಯಾಂಕ್ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ.
ತಮಿಳುನಾಡಿನ ಹೊಸೂರು ಮೂಲದ ಪವಿತ್ರ ತನ್ನ ಗ್ಯಾಂಗ್ ಜೊತೆ ಸೇರಿಸಿಕೊಂಡು ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿ ಅನೇಕರನ್ನು ತನ್ನ ಮೋಸದ ಬಲೆಗೆ ಬೀಳಿಸಿದ್ದಾಳೆ.
ಬ್ಲೂ ವಿಂಗ್ಸ್ ಹೆಸರಿಗೆ ಸುಮಾರು 17 ಕೋಟಿ ರೂಪಾಯಿ ಆರ್ಬಿಐನಿಂದ ಬಂದಿರುವುದಾಗಿ ಹೇಳಿರುವುದಲ್ಲದೇ, ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಸಹಿ ಇರುವ ನಕಲಿ ಪತ್ರ ತೋರಿಸಿ ಅನೇಕಲ್ ನ ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ನೂರಾರು ಜನವರಿಗೆ ವಂಚಿಸಿದ್ದಾಳೆ.
ನೋಟುಗಳ ಬಂಡಲ್ ಇರುವ ವಿಡಿಯೋಗಳನ್ನ ಕಳುಹಿಸಿ ಜನರನ್ನು ಮರುಳು ಮಾಡಿದ ಪವಿತ್ರಾ, ಒಬ್ಬರಿಗೆ 10 ಲಕ್ಷ ಲೋನ್ ನೀಡಿದರೆ ಅದರಲ್ಲಿ ಐದು ಲಕ್ಷ ಸಬ್ಸಿಡಿ ಎಂದು ನಂಬಿಸಿದ್ದಳು. ಲೋನ್ ಬೇಕು ಅಂದರೆ ಮೊದಲು ಹಣ ಡೆಪಾಸಿಟ್ ಮಾಡಬೇಕೆಂದು ಕಥೆ ಕಟ್ಟಿದ್ದು,ಇದನ್ನು ನಂಬಿದ ಜನರು ಲಕ್ಷಾಂತರ ರೂಪಾಯಿ ಹಣ ನೀಡಿದ್ದಾರೆ. ತಮ್ಮಲ್ಲಿ ಹಣ ಇಲ್ಲದೇ ಇನ್ನು ಕೆಲವರು ಸಾಲ ಮಾಡಿ ದುಡ್ಡು ಕೊಟ್ಟಿದ್ದಾರೆ.
ಹಲವು ತಿಂಗಳು ಕಳೆದರೂ ಸಾಲದ ಮೊತ್ತ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಮೋಸ ಬಯಲಾಗಿದೆ. ಸಾಲದ ಸುಲಿಗೆ ಸಿಲುಕಿದ ಅಮಾಯಕ ಜನರು ಬೀದಿಪಾಲಾಗಿದ್ದಾರೆ. ಪ್ರಕರಣ ಸಂಬಂಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪವಿತ್ರ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಹಾಲ್ಬರ್ಟ್ ಮಾರ್ಟಿನ್, ಹೇಮಲತಾ, ಶಾಲಿನಿ ವಿರುದ್ಧ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…