Featured

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ – Vishwanews24

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್​ಬಿಐ ಹೆಸರಿನಲ್ಲಿ ಕೋಟ್ಯಾಂತರ ರೂ. ವಂಚನೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್​ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ.

ತಮಿಳುನಾಡಿನ ಹೊಸೂರು ಮೂಲದ ಪವಿತ್ರ ತನ್ನ ಗ್ಯಾಂಗ್ ಜೊತೆ ಸೇರಿಸಿಕೊಂಡು ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿ ಅನೇಕರನ್ನು ತನ್ನ ಮೋಸದ ಬಲೆಗೆ ಬೀಳಿಸಿದ್ದಾಳೆ.

ಬ್ಲೂ ವಿಂಗ್ಸ್ ಹೆಸರಿಗೆ ಸುಮಾರು 17 ಕೋಟಿ ರೂಪಾಯಿ ಆರ್​ಬಿಐನಿಂದ ಬಂದಿರುವುದಾಗಿ ಹೇಳಿರುವುದಲ್ಲದೇ, ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಸಹಿ ಇರುವ ನಕಲಿ ಪತ್ರ ತೋರಿಸಿ ಅನೇಕಲ್ ನ ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ನೂರಾರು ಜನವರಿಗೆ ವಂಚಿಸಿದ್ದಾಳೆ.

ನೋಟುಗಳ ಬಂಡಲ್ ಇರುವ ವಿಡಿಯೋಗಳನ್ನ ಕಳುಹಿಸಿ ಜನರನ್ನು ಮರುಳು ಮಾಡಿದ ಪವಿತ್ರಾ, ಒಬ್ಬರಿಗೆ 10 ಲಕ್ಷ ಲೋನ್ ನೀಡಿದರೆ ಅದರಲ್ಲಿ ಐದು ಲಕ್ಷ ಸಬ್ಸಿಡಿ ಎಂದು ನಂಬಿಸಿದ್ದಳು. ಲೋನ್ ಬೇಕು ಅಂದರೆ ಮೊದಲು ಹಣ ಡೆಪಾಸಿಟ್ ಮಾಡಬೇಕೆಂದು ಕಥೆ ಕಟ್ಟಿದ್ದು,ಇದನ್ನು ನಂಬಿದ ಜನರು ಲಕ್ಷಾಂತರ ರೂಪಾಯಿ ಹಣ ನೀಡಿದ್ದಾರೆ. ತಮ್ಮಲ್ಲಿ ಹಣ ಇಲ್ಲದೇ ಇನ್ನು ಕೆಲವರು ಸಾಲ ಮಾಡಿ ದುಡ್ಡು ಕೊಟ್ಟಿದ್ದಾರೆ.

ಹಲವು ತಿಂಗಳು ಕಳೆದರೂ ಸಾಲದ ಮೊತ್ತ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಮೋಸ ಬಯಲಾಗಿದೆ. ಸಾಲದ ಸುಲಿಗೆ ಸಿಲುಕಿದ ಅಮಾಯಕ ಜನರು ಬೀದಿಪಾಲಾಗಿದ್ದಾರೆ. ಪ್ರಕರಣ ಸಂಬಂಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪವಿತ್ರ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಹಾಲ್ಬರ್ಟ್ ಮಾರ್ಟಿನ್, ಹೇಮಲತಾ, ಶಾಲಿನಿ ವಿರುದ್ಧ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

9 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

12 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

12 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

14 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

15 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

17 hours ago