Featured

ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಅವುಗಳನ್ನು ಕಿತ್ತೆಸೆಯಬೇಕಿದೆ : ಈಶ್ವರ ಖಂಡ್ರೆ -Vishwanews24

ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಅವುಗಳನ್ನು ಕಿತ್ತೆಸೆಯಬೇಕಿದೆ : ಈಶ್ವರ ಖಂಡ್ರೆ -Vishwanews24

ಬಸವಕಲ್ಯಾಣ,: “ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಅವುಗಳನ್ನು ಕಿತ್ತೆಸೆಯಬೇಕಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಸವಕಲ್ಯಾಣ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದರೂ ಜನರ ಕಲ್ಯಾಣಕ್ಕೆ ಯಾವುದೇ ಹೆಚ್ಚಿನ ಅನುದಾನ ಒದಗಿಸಿಲ್ಲ ಮತ್ತು ಮಹತ್ವದ ಯೋಜನೆಗಳನ್ನು ಪ್ರಕಟಿಸಿಲ್ಲ” ಎಂದರು.

ಇದನ್ನೂ ಓದಿ : ರಾಜ್ಯದಲ್ಲಿ 15 ದಿನಗಳ ಕಾಲ ಯಾವುದೇ ಪ್ರತಿಭಟನೆ, ರಾಜಕೀಯ ರ‍್ಯಾಲಿ ಮತ್ತು ಮದುವೆ, ಸಮಾರಂಭ ನಡೆಸಲು ಅವಕಾಶ ಇಲ್ಲ : ಸಿಎಂ ಬಿಎಸ್ ವೈ -Vishwanews24

“ಅನುಭವ ಮಂಟಪಕ್ಕೆ ಶಂಕುಸ್ಥಾಪನೆ ನೆರವೇರಿದ್ದರೂ ಕೂಡ ಭೂಸ್ವಾಧೀನ ಮತ್ತು ಟೆಂಡರ್ ಪ್ರಕ್ರಿಯೆ ನಡೆದಿಲ್ಲ. ಈ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್ ಹಣ ಪಡೆದು ಹೊರ ಜಿಲ್ಲೆಯವರಿಗೆ ಕೊಡಲಾಗಿದೆ ಎಂದು ಆ ಪಕ್ಷದವರೇ ಆರೋಪಿಸಿದ್ದಾರೆ” ಎಂದು ಹೇಳಿದ್ದಾರೆ.

ಇನ್ನು ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, “ಬೇರೆ ಬೇರೆ ನಿಗಮಗಳನ್ನು ಘೋಷಿಸಿರುವ ಕರ್ನಾಟಕ ಸರ್ಕಾರವು ಮರಾಠಾ ನಿಗಮ ಸೇರಿದಂತೆ ಕೆಲ ನಿಗಮಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿಲ್ಲ. ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮರಾಠರನ್ನು 2 ಎ ಪ್ರವರ್ಗಕ್ಕೆ ಸೇರ್ಪಡೆ ಮಾಡುವ ಭರವಸೆ ನೀಡಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಈಡೇರಿಸಿಲ್ಲ” ಎಂದಿದ್ದಾರೆ.

ಇದನ್ನೂ ಓದಿ :ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಎಲ್ಲರನ್ನೂ ಪಶ್ಚಿಮ ಬಂಗಾಳದಿಂದ ಓಡಿಸುತ್ತಾರೆ : ಮಮತಾ ಬ್ಯಾನರ್ಜಿ -Vishwanews24

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

20 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

20 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

21 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

24 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

24 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

24 hours ago