ಬಸವಕಲ್ಯಾಣ,: “ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಅವುಗಳನ್ನು ಕಿತ್ತೆಸೆಯಬೇಕಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಸವಕಲ್ಯಾಣ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದರೂ ಜನರ ಕಲ್ಯಾಣಕ್ಕೆ ಯಾವುದೇ ಹೆಚ್ಚಿನ ಅನುದಾನ ಒದಗಿಸಿಲ್ಲ ಮತ್ತು ಮಹತ್ವದ ಯೋಜನೆಗಳನ್ನು ಪ್ರಕಟಿಸಿಲ್ಲ” ಎಂದರು.
“ಅನುಭವ ಮಂಟಪಕ್ಕೆ ಶಂಕುಸ್ಥಾಪನೆ ನೆರವೇರಿದ್ದರೂ ಕೂಡ ಭೂಸ್ವಾಧೀನ ಮತ್ತು ಟೆಂಡರ್ ಪ್ರಕ್ರಿಯೆ ನಡೆದಿಲ್ಲ. ಈ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್ ಹಣ ಪಡೆದು ಹೊರ ಜಿಲ್ಲೆಯವರಿಗೆ ಕೊಡಲಾಗಿದೆ ಎಂದು ಆ ಪಕ್ಷದವರೇ ಆರೋಪಿಸಿದ್ದಾರೆ” ಎಂದು ಹೇಳಿದ್ದಾರೆ.
ಇನ್ನು ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, “ಬೇರೆ ಬೇರೆ ನಿಗಮಗಳನ್ನು ಘೋಷಿಸಿರುವ ಕರ್ನಾಟಕ ಸರ್ಕಾರವು ಮರಾಠಾ ನಿಗಮ ಸೇರಿದಂತೆ ಕೆಲ ನಿಗಮಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿಲ್ಲ. ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮರಾಠರನ್ನು 2 ಎ ಪ್ರವರ್ಗಕ್ಕೆ ಸೇರ್ಪಡೆ ಮಾಡುವ ಭರವಸೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈಡೇರಿಸಿಲ್ಲ” ಎಂದಿದ್ದಾರೆ.
ಇದನ್ನೂ ಓದಿ :ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಎಲ್ಲರನ್ನೂ ಪಶ್ಚಿಮ ಬಂಗಾಳದಿಂದ ಓಡಿಸುತ್ತಾರೆ : ಮಮತಾ ಬ್ಯಾನರ್ಜಿ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…