ಹುಬ್ಬಳ್ಳಿ: ದಿಲ್ಲಿ ಜನರ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ದೆಹಲಿ ಚುನಾವಣಾ ಫಲಿತಾಂಶದ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಕೇಜ್ರಿವಾಲ್ ಅಧಿಕಾರದ ಗದ್ದುಗೆ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ ಜನ ಬಿಜೆಪಿ ಕೈ ಹಿಡಿದಿದ್ದಾರೆ ಎಂದರು.
ಕಾಂಗ್ರೆಸ್ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಕುಸಿಯುತ್ತಿದೆ. ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಅಧಿಕಾರದಲ್ಲಿದೆ. ಅದು ನಮ್ಮ ತಪ್ಪಿನಿಂದ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ ಇರೋವರೆಗೂ ಕಾಂಗ್ರೆಸ್ ಉದ್ಧಾರ ಆಗಲ್ಲ ಎಂದು ಕಿಡಿಕಾರಿದರು.
ತೆಲಂಗಾಣ, ಕರ್ನಾಟಕ ಸರ್ಕಾರ ಯಾವಾಗ ಬೇಕಾದರೂ ಪತನ ಆಗಬಹುದು. ಈ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಒಂದು ಕುಟುಂಬದ ಪಕ್ಷ. ಡಬಲ್ ಇಂಜಿನ್ ಸರ್ಕಾರ ಎಲ್ಲಿದೆ ಅಲ್ಲಿ ಮಾತ್ರ ಒಳ್ಳೆ ಕೆಲಸಗಳು ಆಗಿದೆ. ಹೀಗಾಗಿ ಡಬಲ್ ಇಂಜಿನ್ ಸರ್ಕಾರ ತಂದಿದ್ದಾರೆ. ದೆಹಲಿ ಜನ ಮೋದಿ ನಾಯಕತ್ವ ಒಪ್ಪಿದ್ದಾರೆ. ದೆಹಲಿಯನ್ನು ಅಭಿವೃದ್ಧಿ ಮಾಡೋದಾಗಿ ಮೋದಿ ಹೇಳಿದ್ದಾರೆ. ನಾವು ಸ್ಪಷ್ಟ ಬಹುಮತದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…