ಕೇದಾರನಾಥ ಸನ್ನಿಧಾನದಲ್ಲಿ ಪ್ರಧಾನಿ ಮೋದಿ: ವಿಶೇಷ ಪೂಜೆ ಸಲ್ಲಿಕೆ – Vishwanews24

Featured, ರಾಷ್ಟ್ರ ನ್ಯೂಸ್

ಕೇದಾರನಾಥ ಸನ್ನಿಧಾನದಲ್ಲಿ ಪ್ರಧಾನಿ ಮೋದಿ: ವಿಶೇಷ ಪೂಜೆ ಸಲ್ಲಿಕೆ

ಡೆಹ್ರಾಡೂನ್: ಉತ್ತರಾಖಂಡ  ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕೇದಾರನಾಥಕ್ಕೆ ಭೇಟಿ ನೀಡಿದ ಮೋದಿ ಕೆಲಕಾಲ ಪೂಜೆ ಸಲ್ಲಿಸಿದರು. ಬಳಿಕ ಬದರಿನಾಥಕ್ಕೆ ತೆರಳಿದರು. ಮೋದಿ ಭೇಟಿ ಹಿನ್ನೆಲೆ ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳನ್ನು ಹೂವಿನಿಂದ ಅಲಂಕರಿಸಲಾಗಿದೆ. ದೇವಸ್ಥಾನಗಳ ಭೇಟಿ ಬಳಿಕ ಹೇಮಕುಂಡ್ ಸಾಹಿಬ್ ರೋಪ್‍ವೇ  ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಮೌನವಾಗಿರುವುದೇ ಉತ್ತಮ..ನೋಡಿ ಇಂದಿನ ದಿನ ಭವಿಷ್ಯ -Vishwanews24

ಕೇದಾರನಾಥ ರೋಪ್‍ವೇ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಆದಿಗುರು ಶಂಕರಾಚಾರ್ಯ ಸಮಾಧಿಗೆ ಭೇಟಿ ನೀಡಲಿದ್ದಾರೆ. ಇದಾದ ಬಳಿಕ ಮಂದಾಕಿನಿ ಅಷ್ಟಪಥ ಮತ್ತು ಸರಸ್ವತಿ ಅಷ್ಟಪಥ ಉದ್ದಕ್ಕೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ. ಮಾಣ ಗ್ರಾಮದಲ್ಲಿ ರಸ್ತೆ ಮತ್ತು ರೋಪ್‍ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಕೇದಾರನಾಥಕ್ಕೆ ಸಂಪರ್ಕಿಸುವ 9.7 ಕಿಮೀ ಉದ್ದದ ಗೌರಿಕುಂಡ್ ರೋಪ್‍ವೇಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮೂಲಕ ಕೇದಾರನಾಥ ಮತ್ತು ಗೌರಿಕುಂಡ್‍ನಡುವಿನ ಪ್ರಯಾಣದ ಸಮಯ ಪ್ರಸ್ತುತ 6-7 ಗಂಟೆಗಳ ಸಮಯ ಹಿಡಿಯುತ್ತಿದೆ. ಈ ರೋಪ್‍ವೇ ಆದ ಬಳಿಕ ಪ್ರಯಾಣ ಸಮಯ 45 ನಿಮಿಷವಾಗಲಿದೆ. ಇದನ್ನೂ ಓದಿ: ಮೌನವಾಗಿರುವುದೇ ಉತ್ತಮ..ನೋಡಿ ಇಂದಿನ ದಿನ ಭವಿಷ್ಯ -Vishwanews24

Leave a Reply