ಡೆಹ್ರಾಡೂನ್: ಉತ್ತರಾಖಂಡ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕೇದಾರನಾಥಕ್ಕೆ ಭೇಟಿ ನೀಡಿದ ಮೋದಿ ಕೆಲಕಾಲ ಪೂಜೆ ಸಲ್ಲಿಸಿದರು. ಬಳಿಕ ಬದರಿನಾಥಕ್ಕೆ ತೆರಳಿದರು. ಮೋದಿ ಭೇಟಿ ಹಿನ್ನೆಲೆ ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳನ್ನು ಹೂವಿನಿಂದ ಅಲಂಕರಿಸಲಾಗಿದೆ. ದೇವಸ್ಥಾನಗಳ ಭೇಟಿ ಬಳಿಕ ಹೇಮಕುಂಡ್ ಸಾಹಿಬ್ ರೋಪ್‍ವೇ ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಮೌನವಾಗಿರುವುದೇ ಉತ್ತಮ..ನೋಡಿ ಇಂದಿನ ದಿನ ಭವಿಷ್ಯ -Vishwanews24
ಕೇದಾರನಾಥ ರೋಪ್‍ವೇ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಆದಿಗುರು ಶಂಕರಾಚಾರ್ಯ ಸಮಾಧಿಗೆ ಭೇಟಿ ನೀಡಲಿದ್ದಾರೆ. ಇದಾದ ಬಳಿಕ ಮಂದಾಕಿನಿ ಅಷ್ಟಪಥ ಮತ್ತು ಸರಸ್ವತಿ ಅಷ್ಟಪಥ ಉದ್ದಕ್ಕೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ. ಮಾಣ ಗ್ರಾಮದಲ್ಲಿ ರಸ್ತೆ ಮತ್ತು ರೋಪ್‍ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಕೇದಾರನಾಥಕ್ಕೆ ಸಂಪರ್ಕಿಸುವ 9.7 ಕಿಮೀ ಉದ್ದದ ಗೌರಿಕುಂಡ್ ರೋಪ್‍ವೇಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮೂಲಕ ಕೇದಾರನಾಥ ಮತ್ತು ಗೌರಿಕುಂಡ್‍ನಡುವಿನ ಪ್ರಯಾಣದ ಸಮಯ ಪ್ರಸ್ತುತ 6-7 ಗಂಟೆಗಳ ಸಮಯ ಹಿಡಿಯುತ್ತಿದೆ. ಈ ರೋಪ್‍ವೇ ಆದ ಬಳಿಕ ಪ್ರಯಾಣ ಸಮಯ 45 ನಿಮಿಷವಾಗಲಿದೆ. ಇದನ್ನೂ ಓದಿ: ಮೌನವಾಗಿರುವುದೇ ಉತ್ತಮ..ನೋಡಿ ಇಂದಿನ ದಿನ ಭವಿಷ್ಯ -Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…