Featured

ಕೇರಳಕ್ಕೆ ಮುಂಗಾರು ಆಗಮನ : ಮಳೆ ಆರಂಭ – Vishwanews24

ಕೇರಳಕ್ಕೆ ಮುಂಗಾರು ಆಗಮನ : ಮಳೆ ಆರಂಭ

ತಿರುವನಂತಪುರ : ಇಂದು ಕೇರಳಕ್ಕೆ ಮಾನ್ಸೂನ್ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ಜೂನ್ 1 ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತಿದ್ದು, ಈ ವರ್ಷ 7 ದಿನ ತಡವಾಗಿ ಕೇರಳಕ್ಕೆ ಮುಂಗಾರು ಆಗಮಿಸಿದೆ.

ಇಂದು ಬೆಳಗ್ಗೆಯಿಂದಲೇ ಕೇರಳದ ಎಲ್ಲಾ ಭಾಗಗಳಲ್ಲಿ ಮಳೆ ಆರಂಭವಾಗಿದೆ. ಪ್ರತಿ ವರ್ಷವೂ ಜೂನ್ 1ರಂದು ಮುಂಗಾರು ಮಾರುತಗಳು ಕೇರಳಕ್ಕೆ ಆಗಮಿಸುತ್ತಿದ್ದವು ಅದಾದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಕೂಡ ಮಳೆ ಆರಂಭವಾಗುತ್ತಿತ್ತು. ಇದೀಗ ಮುಂಗಾರು ಒಂದು ವಾರ ತಡವಾಗಿದ್ದರೂ ಕೂಡ ಬಿಪರ್​ಜಾಯ್ ಚಂಡಮಾರುತದಿಂದಾಗಿ ಮಳೆಯ ಪ್ರಭಾವ ಹೆಚ್ಚಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಮಧ್ಯ ಅರೇಬಿಯನ್ ಸಮುದ್ರ, ತಮಿಳುನಾಡು, ಕರ್ನಾಟಕ, ಮತ್ತು ನೈಋತ್ಯ, ಮಧ್ಯ, ಈಶಾನ್ಯ ಬಂಗಾಳ ಕೊಲ್ಲಿ, ಈಶಾನ್ಯ ರಾಜ್ಯಗಳು ಮತ್ತು ಕೇರಳದ ಉಳಿದ ಭಾಗಗಳಲ್ಲಿ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಹವಾಮಾನ ಇಲಾಖೆ ಹೇಳಿದೆ

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

7 minutes ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

12 minutes ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

37 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

45 minutes ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

51 minutes ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago